ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬೆಂಗಳೂರಿನ ರಾಷ್ಟ್ರೀಯ ತನಿಖಾ ಸಂಸ್ಥೆಯ ಎನ್ ಐಎ ತಂಡವು ಭಾನುವಾರ ಬಂಧಿಸಿರುವುದಾಗಿ ಮಾಹಿತಿ ನೀಡಿದೆ.
ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತ ಆರೋಪಿ ತಮಿಳುನಾಡು ರಾಜ್ಯದ ರಾಮನಾಥಪುರಂ ಮೂಲದ ನಿವಾಸಿ ಮೊಹಮ್ಮದ್ ಇಮ್ರಾನ್ ಖಾನ್ (39) ಎಂದು ತಿಳಿಸಿದೆ.
ಇದೇ ಪ್ರಕರಣದಲ್ಲಿ ಈತ ಜೂನ್ 2021 ರಿಂದಲೇ ಅಧಿಕಾರಿಗಳ ಕೈಗೆ ಸಿಗದೇ ತಲೆಮರೆಸಿಕೊಂಡಿದ್ದಾನೆ ಎಂದು ಎನ್‌ಐಎ ತಿಳಿಸಿದೆ.


