ಮಾನವ ಕಳ್ಳಸಾಗಣೆ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, 14 ಜನರನ್ನು ಬಂಧಿಸಿದ್ದಾರೆ. ನೊಂದ 20 ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.
ಕಳೆದ ಒಂದು ತಿಂಗಳ ಅವಧಿಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಾಗಲಗುಂಟೆ, ವರ್ತೂರು, ಕೆ. ಆರ್. ಪುರಂ, ವಿದ್ಯಾರಣ್ಯಪುರ, ಅಮೃತಹಳ್ಳಿ ಠಾಣಾ ವ್ಯಾಪ್ತಿಗಳಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.


