ಬೀದರ್: ಜಿಲ್ಲೆಯ ಹುಮನಾಬಾದ್ ವೀರಭದ್ರೇಶ್ವರ ಜಾತ್ರಾ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆರವರು ಹಾಗೂ ಮಾಜಿ ಸಚಿವರಾದ ರಾಜಶೇಖರ ಬಿ. ಪಾಟೀಲ್ ರವರು ಜಂಟಿಯಾಗಿ ವೀರಭದ್ರೇಶ್ವರ ದೇವರ ದರ್ಶನ ಪಡೆದುಕೊಂಡರು.
ಈ ಸಂದರ್ಭದಲ್ಲಿ ಲೋಕಸಭೆ ಸದಸ್ಯರಾದ ಸಾಗರ ಖಂಡ್ರೆ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್, ಭೀಮರಾವ ಪಾಟೀಲ್, ಡಿ.ಸಿ.ಸಿ. ಬ್ಯಾಂಕ್ ನ ಉಪಾಧ್ಯಕ್ಷರು ಅಭಿಷೇಕ ಪಾಟೀಲ್ , ದೇವಸ್ಥಾನ ಮಂಡಳಿಯ ಅಧ್ಯಕ್ಷರಾದ ವೀರಣ್ಣ ಪಾಟೀಲ್, ಧನರಾಜ ತಾಳಂಪಳ್ಳಿ ರವರು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4