ಬೀದರ್ : ಬಸ್ಸಿನಲ್ಲಿ ಪ್ರಯಾಣಿಕ ಮರೆತು ಹೋಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮರಳಿಸಿ ಕಂಡಕ್ಟರ್ ಮಾನವೀಯತೆ ಮೆರೆದ ಘಟನೆ ಬೀದರ್ ನಲ್ಲಿ ನಡೆದಿದೆ.
ಭಾಲ್ಕಿ ನಿಲ್ದಾಣದಿಂದ ಮಹಾರಾಷ್ಟ್ರದ ನಿಲಂಗಾಕ್ಕೆ ಪ್ರಯಾಣಿಸಿದ್ದ ಮಹಮದ್ ಎಂಬವರು 3 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಬಸ್ಸಿನಲ್ಲಿ ಮರೆತು ಹೋಗಿದ್ದರು.
ಚಿನ್ನಾಭರಣ ಬಸ್ಸಿನಲ್ಲಿ ಬಿಟ್ಟಿದ್ದು ನೆನಪಾದ ಬಳಿಕ ಗಾಬರಿಗೊಂಡು ಬಸ್ ನಿಲ್ದಾಣಕ್ಕೆ ವಾಪಸಾಗಿದ್ದಾರೆ. ಬಳಿಕ ನಿರ್ವಾಹಕ ಪ್ರಕಾಶ ಹತ್ತಿರ ಚಿನ್ನಾಭರಣ ಸುರಕ್ಷಿತವಾಗಿರುವ ವಿಷಯ ಗೊತ್ತಾಗಿ ನಿಟ್ಟುಸಿರು ಬಿಟ್ಟಿದ್ದಾರೆ.
ನಿರ್ವಾಹಕ ಪ್ರಕಾಶ್ ಅವರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮರಳಿ ಕೊಟ್ಟು ಮಾನವೀಯತೆ ಮೆರೆದಿದ್ದಾರೆ. ಪ್ರಕಾಶ್ ಅವರ ಪ್ರಾಮಾಣಿಕತೆಗೆ ಮೆಚ್ಚಿ ಪ್ರಯಾಣಿಕ ಮಹಮದ್ ಅಜರ್ ಹಾಗೂ ಸಾರಿಗೆ ಅಧಿಕಾರಿಗಳು ಚಾಲಕ ಹಾಗೂ ನಿರ್ವಾಹಕನನ್ನು ಸನ್ಮಾನಿಸಿ ಗೌರವಿಸಿದ್ದಾರೆ .
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296