ಪಾವಗಡ: ಪವಿತ್ರ ಕ್ಷೇತ್ರವಾದ ಧರ್ಮಸ್ಥಳವನ್ನು ಅಪವಿತ್ರಗೊಳಿಸಲು ಮುಂದಾಗುತ್ತಿದ್ದಾರೆ ಇದನ್ನು ಹಿಂದೂ ಸಮಾಜ ತೀವ್ರವಾಗಿ ಖಂಡಿಸಬೇಕೆಂದು ಮಾಜಿ ಸಚಿವ ವೆಂಕಟರಮಣಪ್ಪ ತಿಳಿಸಿದ್ದಾರೆ.
ಸೋಮವಾರ ಪಟ್ಟಣದಲ್ಲಿ ಶ್ರೀಧರ್ಮಸ್ಥಳ ಭಕ್ತಾಭಿಮಾನಿಗಳ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಗೆ ಚಾಲನೆ ನೀಡಿದ ನಂತರ ಅವರು ಮಾತನಾಡಿ, ಧರ್ಮಸ್ಥಳದ ವೀರೇಂದ್ರ ಹೆಗಡೆಯವರು, ಧರ್ಮಸ್ಥಳ ಸಂಘವನ್ನು ಸ್ಥಾಪಿಸಿ ಗ್ರಾಮೀಣ ಭಾಗದ ಅದೆಷ್ಟು ಲಕ್ಷಾಂತರ ಜನ ಬಡ ಹೆಣ್ಣು ಮಕ್ಕಳಿಗೆ ದಾರಿ ದೀಪವಾಗಿದ್ದಾರೆ. ಅಂತಹ ವ್ಯಕ್ತಿಗಳ ವಿರುದ್ಧ ಈ ರೀತಿ ಇಲ್ಲಸಲ್ಲದ ಆರೋಪಗಳನ್ನು ಮಾಡಿ ತೇಜೋವಧೆ ಮಾಡುವುದು ಸರಿಯಲ್ಲ ಎಂದರು.
ಪ್ರತಿಭಟನೆಯು ಗುರುಭವನ ಮೈದಾನದಿಂದ ಪ್ರಾರಂಭಗೊಂಡು ಬಳ್ಳಾರಿ ರಸ್ತೆಯ ಮೂಲಕ ಶನಿಮಹಾತ್ಮ ವೃತ್ತದಲ್ಲಿ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ತಿಮರೋಡಿ, ಜಯಂತ್ ಟಿ., ಸಮೀರ್ ವಿರುದ್ಧ ಧಿಕ್ಕಾರಕ್ಕೆ ಕೂಗಿದ್ರು.
ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಅಂಜನಪ್ಪ, ಬಿಜೆಪಿ ಹಿರಿಯ ಮುಖಂಡ ಡಾ.ಜಿ.ವೆಂಕಟರಾಮಯ್ಯ, ಮಂಡಲಾಧ್ಯಕ್ಷ ದೊಡ್ಡಹಳ್ಳಿ ಅಶೋಕ್, ಎಸ್ ಎಸ್ ಕೆ ಸಂಘದ ನಿರ್ದೇಶಕ ಎನ್.ಆರ್.ಅಶ್ವತ್ ಕುಮಾರ್, ವೈ.ಎನ್.ಹೊಸಕೋಟೆ ಉಮೇಶ್, ರೈತ ಸಂಘದ ಅಧ್ಯಕ್ಷ ನರಸಿಂಹ ರೆಡ್ಡಿ, ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ವೇಳೆ ಅಲ್ಕುಂದಿರಾಜ್, ರಾಘವೇಂದ್ರ, ಬ್ಯಾಡನೂರು ಶಿವು, ಪಾವಗಡ ರವಿ, ಜೆಡಿಎಸ್ ಬಲರಾಮ್ ರೆಡ್ಡಿ, ಮನು ಮಹೇಶ್, ರಾಮಾಂಜಿ ಕಾವಲಗೆರೆ, ಶಿವಕುಮಾರ್, ಕಾಂಗ್ರೆಸ್ ಮುಖಂಡರುಗಳಾದ ಎಂ.ಎಸ್.ವಿಶ್ವನಾಥ್, ರೈತ ಸಂಘದ ಜಿಲ್ಲಾಧ್ಯಕ್ಷ ಪೂಜಾರಪ್ಪ, ಶ್ರೀರಾಮ್ ಸೇನೆ ಜಿಲ್ಲಾ ಅಧ್ಯಕ್ಷ ಅನಿಲ್ ಯಾದವ್ ಮತ್ತು ಹಿಂದೂಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಶ್ರೀ ಮಂಜುನಾಥ ಸ್ವಾಮಿ ಭಕ್ತಾಭಿಮಾನಿಗಳು ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ವರದಿ: ನಂದೀಶ್ ನಾಯ್ಕ ಪಿ. ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


