ಬೆಂಗಳೂರು ಗಂಡನೊಬ್ಬ ಹೆಂಡತಿಯ ಜೊತೆ ಜಗಳವಾಡಿ ಆಕೆಯ ಬೆರಳನ್ನೇ ಕಚ್ಚಿ ತಿಂದಿರುವ ಘಟನೆ ಕೋಣನಕುಂಟೆ ವ್ಯಾಪ್ತಿಯಲ್ಲಿ ನಡೆದಿದೆ.
ಈ ಘಟನೆಯಲ್ಲಿ ಗಾಯಗೊಂಡ ಸಂತ್ರಸ್ತೆಯನ್ನು ಪುಷ್ಪಾ ಎಂದು ಗುರುತಿಸಲಾಗಿದೆ. ಈಕೆ ಗಂಡ ವಿಜಯ್ ಕುಮಾರ್ ಹಲ್ಲೆ ನಡೆಸಿರುವ ಆರೋಪಿಯಾಗಿದ್ದಾನೆ.ಹೆಂಡತಿ ಜೊತೆ ಜಗಳವಾಡುತ್ತಿದ್ದಾಗ ಆಕೆಯ ಎಡಗೈ ಬೆರಳನ್ನೇ ಕಚ್ಚಿ ತಿಂದಿದ್ದಾನೆ ಎನ್ನಲಾಗಿದೆ.
ವಿವಾಹದ ಬಳಿಕ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಪತಿಯ ಕಿರುಕುಳ ಬೇಸತ್ತ ಪತ್ನಿ ಪತಿಯಿಂದ ದೂರವಿದ್ದರು.
ಆದರೆ ಜುಲೈ 28ರಂದು ಪತಿ ವಿಜಯ್ಕುಮಾರ್ ಪತ್ನಿ ವಾಸಿಸುತ್ತಿದ್ದ ಮನೆಗೆ ತೆರಳಿ ಜಗಳವಾಡಿದ್ದ. ಈ ವೇಳೆ ಪತ್ನಿಯ ಬೆರಳನ್ನು ಪತಿ ಕಚ್ಚಿ ತಿಂದಿದ್ದು ಮಾತ್ರವಲ್ಲದೆ ನಿನ್ನನ್ನು ಕೂಡಾ ಕೊಂದು ಇದೇ ರೀತಿ ತಿನ್ನುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಈ ಕುರಿತು ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


