ತುಮಕೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯಿಂದಲೇ ಪತ್ನಿ ಬರ್ಬರವಾಗಿ ಕೊಲೆಯಾಗಿರೋ ಘಟನೆ ತುಮಕೂರಿನ ಹೊರವಲಯದ ಅಂತರಸನಹಳ್ಳಿ ಬಳಿ ನಡೆದಿದೆ.
ಮಂಡ್ಯ ಜಿಲ್ಲೆಯ ಗಣನೂರು ಗ್ರಾಮದ ಗೀತಾ (20) ಕೊಲೆಯಾದ ಮಹಿಳೆಯಾಗಿದ್ದಾರೆ. ಪತಿ ನವೀನ್ ಪತ್ನಿ ಗೀತಾಳನ್ನ ಕೊಲೆ ಮಾಡಿದ್ದಾನೆ. ಕುತ್ತಿಗೆ, ಮುಖ ಹಾಗೂ ಇತರೆ ಭಾಗಗಳಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.
ನಿನ್ನೆ ರಾತ್ರಿ ಕೌಟುಂಬಿಕ ಕಲಹದ ಕಾರಣ ಕೊಲೆಯಾಗಿದೆ ಎನ್ನಲಾಗಿದೆ. ನವೀನ್, ತುಮಕೂರು ತಾಲ್ಲೂಕಿನ ಅಮೃತಗಿರಿಯ ವಾಸಿಯಾಗಿದ್ದಾನೆ. ಅಂತರಸನಹಳ್ಳಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇಬ್ಬರು ವಾಸ ಮಾಡ್ತಿದ್ರು. ನವೀನ್ ಅಂತರಸನಹಳ್ಳಿ ತರಕಾರಿ ಮಾರುಕಟ್ಟೆಯಲ್ಲಿ ಕೆಲಸ ಮಾಡ್ತಿದ್ದನು.
2 ವರ್ಷದ ಹಿಂದೆ ಇಬ್ಬರಿಗೂ ಅಂತರ್ಜಾಲದಲ್ಲಿ ಪರಿಚಯ ಆಗಿ ಮದುವೆ ಆಗಿದ್ರು. ಪತಿ–ಪತ್ನಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಕಳೆದ ರಾತ್ರಿ ಗಲಾಟೆ ತಾರಕಕ್ಕೇರಿ ಮನೆಯಲ್ಲೇ ಕೊಲೆಯಾಗಿದೆ. ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC