ಕೋಲಾರ: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ತಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಾರಾಯಣಸ್ವಾಮಿ(40), ಪವನ್(12), ನಿತಿನ್(10) ಮೃತರಾಗಿದ್ದಾರೆ.
ಮಾಹಿತಿಯ ಪ್ರಕಾರ ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಹೇಳಲಾಗಿದೆ. ಪತ್ನಿ ಲಕ್ಷ್ಮೀ ಬೇರೊಬ್ಬರ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದು, ಇದೇ ಕಾರಣದಿಂದಾಗಿ ತನ್ನ ಇಬ್ಬರು ಮಕ್ಕಳೊಂದಿಗೆ ಪತಿ ನಾರಾಯಣಸ್ವಾಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296