ನವದೆಹಲಿ: ಕಳೆದ ವರ್ಷ ನವೆಂಬರ್ 30 ರಂದು ವಿವಾಹವಾಗಿದ್ದ ನವ ವಿವಾಹಿತ ಜೋಡಿಯೊಂದು 24 ಗಂಟೆಯೊಳಗೆ ದಾರುಣ ಅಂತ್ಯ ಕಂಡಿರುವ ಘಟನೆ ಗಾಜಿಯಾಬಾದ್ ನಲ್ಲಿ ನಡೆದಿದೆ. ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟರೆ, ಪತಿಯ ಸಾವಿನಿಂದ ಆಘಾತಗೊಂಡು ಪತ್ನಿ ಕೂಡ ಕಟ್ಟಡದಿಂದ ಜಿಗಿದು ಸಾವನ್ನಪ್ಪಿದ್ದಾರೆ.
ನವವಿವಾಹಿತ ಜೋಡಿ ದೆಹಲಿಯ ಮೃಗಾಲಯಕ್ಕೆ ಭೇಟಿ ನೀಡಿದಾಗ ದುರ್ಘಟನೆ ನಡೆದಿದ್ದು, ಅಲ್ಲಿ ಅಭಿಷೇಕ್ (25) ಗೆ ಎದೆನೋವು ಕಾಣಿಸಿಕೊಂಡಿತ್ತು. ಅಂಜಲಿ ತಕ್ಷಣ ತನ್ನ ಸ್ನೇಹಿತರನ್ನು ಕರೆದು ಪತಿಯನ್ನು ಆಸ್ಪತ್ರೆಗೆ ಸೇರಿಸಿದರು. ಅಲ್ಲಿ ಅಭಿಷೇಕ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಆತನಿಗೆ ಹೃದಯಾಘಾತವಾಗಿದ್ದಾಗಿ ತಿಳಿಸಿದ್ದಾರೆ.
ಪತಿಯ ಸಾವಿನ ಸುದ್ದಿಯನ್ನು ಅರಗಿಸಿಕೊಳ್ಳಲಾಗದೆ ಅಂಜಲಿ 7ನೇ ಮಹಡಿಯ ಬಾಲ್ಕನಿಯಿಂದ ಜಿಗಿದಿದ್ದಾಳೆ. ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ವೈಶಾಲಿ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಇಂದು ಮುಂಜಾನೆ ಆಕೆಯೂ ಕೊನೆಯುಸಿರೆಳೆದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


