nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ನಿಯ ಶೀಲ ಶಂಕಿಸಿ  12 ವರ್ಷ ದಿಗ್ಬಂಧನದಲ್ಲಿಟ್ಟ ಪತಿ  
    ರಾಜ್ಯ ಸುದ್ದಿ February 1, 2024

    ಪತ್ನಿಯ ಶೀಲ ಶಂಕಿಸಿ  12 ವರ್ಷ ದಿಗ್ಬಂಧನದಲ್ಲಿಟ್ಟ ಪತಿ  

    By adminFebruary 1, 2024No Comments2 Mins Read
    hd kote

    ಎಚ್.ಡಿ.ಕೋಟೆ: ಪತ್ನಿಯ ಶೀಲ ಶಂಕಿಸಿದ ಪತಿಯೋರ್ವ 12 ವರ್ಷಗಳಿಂದ ಮನೆ ಬಾಗಿಲಿಗೆ ಮೂರು ಬೀಗ ಜಡಿದು ಪತ್ನಿಯನ್ನು  ದಿಗ್ಬಂಧನಲ್ಲಿರಿಸಿದ ಅಮಾನವೀಯ ಕೃತ್ಯ ಎಚ್.ಡಿ.ಕೋಟೆ ತಾಲೂಕಿನ ಎಚ್.ಮಟಕೆರೆಯಲ್ಲಿ ನಡೆದಿದೆ.

    ಎಚ್.ಡಿ.ಕೋಟೆ ತಾಲೂಕಿನ ಹೈರಿಗೆ ಗ್ರಾಮದ ಸುಮಾ ಮನೆಯಲ್ಲಿ ದಿಗ್ಬಂಧನದ ಜೀವನ ನಡೆಸುತ್ತಿರುವ ಮಹಿಳೆಯಾಗಿದ್ದಾರೆ.  ಇವರ ಪತಿ ಸಣ್ಣಾಲಯ್ಯನ ವಿಪರೀತ ಅನುಮಾನದ ಪ್ರವೃತ್ತಿಯಿಂದಾಗಿ 12 ವರ್ಷಗಳ ಕಾಲ ಪತ್ನಿ ಅಜ್ಞಾತ ವಾಸ ಅನುಭವಿಸಿದ್ದಾಳೆ.


    Provided by
    Provided by

    12 ವರ್ಷದ ಹಿಂದೆ ಸಣ್ಣಾಲಯ್ಯನನ್ನು ವಿವಾಹವಾಗಿದ್ದ 3ನೇ ಪತ್ನಿ ಸುಮಾಗೆ ಇಬ್ಬರು ಮಕ್ಕಳಿದ್ದಾರೆ. ಸಣ್ಣಾಲಯ್ಯ  ಸುಮಾ ಅವರನ್ನು ವಿವಾಹವಾಗುವುದಕ್ಕೂ ಮೊದಲು ಎರಡು ವಿವಾಹವಾಗಿದ್ದ. ಈತನ ಕಾಟ ಸಹಿಸಲಾಗದೇ ಅವರು ದೂರವಾಗಿದ್ದರು.

    ವಿವಾಹವಾದಂದಿನಿಂದ ಪತ್ನಿಯ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ ಸಣ್ಣಾಲಯ್ಯ ಮನೆಯ ಬಾಗಿಲಿಗೆ ಮೂರು ಬೀಗ ಜಡಿದು ಆಕೆಯನ್ನು ದಿಗ್ಬಂಧನದಲ್ಲಿ ಜೀವನ ಕಳೆಯುವಂತೆ ಮಾಡಿದ್ದ.

    ಮನೆಯ ಕಿಟಕಿಗಳನ್ನೂ ಬಿಡದೇ ಮುಚ್ಚಿ,  ಭದ್ರಪಡಿಸಿ ಪತ್ನಿ ಯಾರೊಂದಿಗೂ ಮಾತನಾಡದಂತೆ ಎಚ್ಚರವಹಿಸಿದ್ದ.  ಮನೆಯೊಳಗೆ ಶೌಚಾಲಯ ಕೂಡ ಇಲ್ಲದೇ ಪತ್ನಿ ಇಡೀ ದಿನ ಮನೆಯೊಳಗೆ ಕೂರಬೇಕಿತ್ತು. ಬಕೆಟ್ ನಲ್ಲಿ ಮಲಮೂತ್ರ ಮಾಡಿಸಿ, ರಾತ್ರಿ ವೇಳೆ ಮನೆಯಿಂದ ಹೊರಗೆ ಮಲಮೂತ್ರವನ್ನು ಸಣ್ಣಾಲಯ್ಯ ಪತ್ನಿಯಿಂದಲೇ ಸುರಿಸುತ್ತಿದ್ದ.

    ಇನ್ನೂ ತಾನು ನೀಡುತ್ತಿರುವ ಟಾರ್ಚರ್ ಬಗ್ಗೆ ಯಾರಿಗಾದರೂ ತಿಳಿಸಿದರೆ, ಕೊಲೆ ಮಾಡುವುದಾಗಿ ಸುಮಾ ಅವರನ್ನು  ಬೆದರಿಸಿದ್ದ. ಸಣ್ಣಾಲಯ್ಯನ ವರ್ತನೆಯ ಬಗ್ಗೆ ಗ್ರಾಮಸ್ಥರು, ನೆರೆಹೊರೆಯವರು ತಿಳಿದಿದ್ದರೂ, ಆತನ ಬಗ್ಗೆ ಮಾತನಾಡಲು ಹೆದರಿ ಮಾಹಿತಿ ನೀಡಲು ಹಿಂಜರಿಯುತ್ತಿದ್ದರು.

    ಸುಮಾ ಅವರು ಪತಿಯ ದಿಗ್ಬಂಧನದಲ್ಲಿರುವುದನ್ನು ತಿಳಿದ ಅವರ ಸಂಬಂಧಿಕರೊಬ್ಬರು ನೀಡಿದ ಮಾಹಿತಿಯ ಮೇರೆಗೆ  ವಕೀಲ ಸಿದ್ದಪ್ಪಾಜಿ,  ಸಾಂತ್ವನ ಕೇಂದ್ರದ ಜಶೀಲ ಎಎಸ್ ಐ ಸುಭಾನ್ ಇತರರ ತಂಡ ಸುಮಾ ಮನೆಗೆ ಭೇಟಿ ನೀಡಿತ್ತು.  ವಿಷಯ ತಿಳಿಯುತ್ತಿದ್ದಂತೆಯೇ ಸುಮಾ ಮನೆಯ ಸುತ್ತ ಗ್ರಾಮಸ್ಥರು ಜಮಾಯಿಸಿದ್ದರು.

    ಬುಧವಾರ ರಾತ್ರಿ ಘಟನೆ ಬೆಳಕಿಗೆ ಬಂದ ತಕ್ಷಣವೇ ರಾತ್ರೋರಾತ್ರಿ ಸುಮಾ ಮತ್ತು ಮಕ್ಕಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.  ಸಣ್ಣಾಲಯ್ಯನ ಕೃತ್ಯದ ಬಗ್ಗೆ ಗ್ರಾಮದಲ್ಲಿ ಹಲವಾರು ಬಾರಿ ನ್ಯಾಯ ಪಂಚಾಯತಿ ನಡೆದರೂ ಆತ ತಪ್ಪು ತಿದ್ದಿಕೊಳ್ಳದೇ ಮತ್ತೆ ತನ್ನ ಚಾಳಿ ಮುಂದುವರಿಸುತ್ತಿದ್ದ ಎನ್ನಲಾಗಿದೆ.

    ಸದ್ಯ ಮನೆಯ ಬೀಗ ಮುರಿದು ಸುಮಾ ಅವರನ್ನು  ಪೊಲೀಸರು ರಕ್ಷಿಸಿದ್ದಾರೆ. ಮಹಿಳೆಯ  ಒಪ್ಪಿಗೆಯ ಮೇರೆಗೆ ಸದ್ಯ ತವರು ಮನೆಯಲ್ಲಿ ಮಹಿಳೆಗೆ ಪೊಲೀಸರು ಆಶ್ರಯ ಕೊಡಿಸಿದ್ದಾರೆ. ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ.

    ವರದಿ: ಮಲಾರ ಮಹದೇವಸ್ವಾಮಿ

    admin
    • Website

    Related Posts

    ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ

    March 7, 2026

    ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು

    March 7, 2026

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ…

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.