ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಪತ್ನಿಗೆ ಚಾಕು ಇರಿದು ಎಸ್ಕೆಪ್ ಆಗಿದ್ದ ಆರೋಪಿಯನ್ನು ಬಾಣಸವಾಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಜೂ. 21ರ ಸಂಜೆ ಬಾಣಸವಾಡಿಯ ಸೇಂಟ್ ಜೋಸೆಫ್ ಚರ್ಚ್ ಬಳಿ ಈ ಘಟನೆ ನಡೆದಿತ್ತು.
ನಿಖಿತಾ ಹಾಗೂ ದಿವಾಕರ್ 9 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಅತಿಯಾದ ಮದ್ಯಪಾನದ ಚಟ ಹೊಂದಿದ್ದ ದಿವಾಕರನಿಂದ ದೂರವಾಗಿದ್ದ ನಿಖಿತಾ ಲಿಂಗರಾಜಪುರದಲ್ಲಿ ಪ್ರತ್ಯೇಕವಾಗಿ ವಾಸವಿದ್ದಳು. ಇತ್ತೀಚೆಗೆ ಪುನರ್‌ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಬಂದಿದ್ದ ದಿವಾಕರ್ ತನ್ನ ಚಿಕ್ಕಪ್ಪನ ಮಗ ಪ್ರತೀಬ್ ಮನೆಯ ಸಮೀಪದಲ್ಲಿ ವಾಸವಿದ್ದ.
ಪತ್ನಿ ಸರಿ ಇಲ್ಲವೆಂದು ಅನುಮಾನ ಹೊಂದಿದ್ದ ದಿವಾಕರ್ ಆಕೆಯ ಹತ್ಯೆಗೆ ಸಂಚು ರೂಪಿಸಿದ್ದ. ಅದರಂತೆ ಜೂನ್ 21ರಂದು ಮಾತನಾಡಬೇಕು ಎಂದು ಲಿಂಗಾರಾಜಪುರದ ಆಕೆಯ ಮನೆಯಿಂದ ಕರೆದೊಯ್ಯಲು ದಿವಾಕರ್ ಹಾಗೂ ಪ್ರತೀಭ್ ಬಂದಿದ್ದರು. ಪ್ರತೀಬ್ ಬೈಕ್ ಚಾಲನೆ ಮಾಡುತ್ತಿದ್ದರೆ, ದಿವಾಕರ್ ಮಧ್ಯೆ ಕುಳಿತಿದ್ದ. ನಿಖಿತಾಳನ್ನು ಕೊನೆಯಲ್ಲಿ ಕೂರಿಸಿ ಕರೆದೊಯ್ದಿದ್ದ ಆರೋಪಿಗಳು, ಮಾರ್ಗ ಮಧ್ಯೆ ತಿರುವಿನಲ್ಲಿ ಆಕೆಯನ್ನು ಬೈಕ್‌ನಿಂದ ಬೀಳಿಸಿದ್ದರು.
ಬಳಿಕ ದಿವಾಕರ್, ನಿಖಿತಾಳ ಕುತ್ತಿಗೆ, ಹೊಟ್ಟೆ, ಎದೆ ಸೇರಿ ಐದು ಕಡೆ ಚೂರಿಯಿಂದ ಇರಿದು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


