ಬೆಂಗಳೂರು: ಬೆಂಗಳೂರಿನಲ್ಲೂ ಅಂಥಹುದೇ ಒಂದು ಘಟನೆ ನಡೆದಿದೆ. ನನ್ನ ಗಂಡನೊಂದಿಗೆ ಅಕ್ರಮ ಸಂಬಂದ ಇಟ್ಟುಕೊಂಡಿದ್ದಿಯಾ ಎಂಬ ಆಕ್ರೋಶದಿಂದ ಮಹಿಳೆಯೊಬ್ಬರು ಗುಂಪು ಕಟ್ಟಿಕೊಂಡು ಹೋಗಿ ಯುವತಿ ಮನೆ ಮೇಲೆ ದಾಳಿ ಮಾಡಿದ್ದಾರೆ.
ಶರಣ್ ಎಂಬಾತ ಪ್ರತಿಮಾ ಎಂಬಾಕೆಯ ಜತೆಗೆ ಕಳೆದ ಮೂರು ವರ್ಷಗಳಿಂದ ಆತ್ಮೀಯವಾಗಿದ್ದ ಎನ್ನಲಾಗಿದೆ. ಇದರ ಬಗ್ಗೆ ಹಲವು ಬಾರಿ ಎಚ್ಚರಿಕೆ ನೀಡಿದ ಹೊರತಾಗಿಯೂ ಸಂಬಂಧವನ್ನು ಮುಂದುವರಿಸಿದ್ದರಿಂದ ಆಕ್ರೋಶಗೊಂಡ ಶರಣ್ ಪತ್ನಿ ಸಮಂತಾ ಗ್ಯಾಂಗ್ ಕಟ್ಟಿಕೊಂಡು ಹೋಗಿ ಪ್ರತಿಮಾಳ ಮನೆ ಮೇಲೆ ದಾಳಿ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.
ಕೆಂಪರಾಜು, ಶರತ್ ಮತ್ತು ಶರಣ್ ಪತ್ನಿ ಸಮಂತಾ ಅವರು ರಾತ್ರಿ 11.30ರ ಹೊತ್ತಿಗೆ ನಮ್ಮ ಮನೆಗೆ ಅಕ್ರಮ ಪ್ರವೇಶ ಮಾಡಿ ದಾಂಧಲೆ ಮಾಡಿದ್ದಾರೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಯುವತಿ ಕೊತ್ತನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಪ್ರಕರಣ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.


