ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಸಿ.ಕೆ.ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಿಹರಪುರ ಗ್ರಾಮದ ಬೂತಮ್ಮ ಎಂಬವರು ಗುಡಿಸಲಿನಲ್ಲಿ ವಾಸವಿದ್ದು, ಇವರ ಗುಡಿಸಲಿಗೆ ಬೆಂಕಿ ಬಿದ್ದ ಪರಿಣಾಮ ಮಕ್ಕಳ ವಿದ್ಯಾಭ್ಯಾಸದ ದಾಖಲೆಗಳು ಮತ್ತು ದಿನ ಬಳಕೆ ವಸ್ತುಗಳು ಸುಟ್ಟು ಕರಕಲಾಗಿದೆ.
ಈ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿ ಮಾಜಿ ಶಾಸಕರಾದ ಕೆ. ಎಂ. ತಿಮ್ಮರಾಯಪ್ಪ ನವರು ಸಂಬಂಧ ಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ, ಸರ್ಕಾರದಿಂದ ಪರಿಹಾರ ಬರುವಂತೆ ಕ್ರಮ ವಹಿಸಿ ನಷ್ಟವಾದ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೇ, ಬೂತಮ್ಮನವರಿಗೆ ಆರ್ಥಿಕ ಸಹಾಯ ಮಾಡಿದರು.
ವರದಿ: ನಂದೀಶ್ ನಾಯ್ಕ ಪಿ.,
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx