ಬೆಂಗಳೂರು: ಹುಟ್ಟು ಹಬ್ಬದ ದಿನವೇ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪರಿಚಿತರೇ ಯುವಕನನ್ನು ಬರ್ಬರವಾಗಿ ಹತ್ಯೆ ನಡೆಸಿದ್ದಾರೆನ್ನಲಾಗಿದೆ.
ಗೊಲ್ಲಹಳ್ಳಿ ನಿವಾಸಿ ಹೇಮಂತ್ ಕುಮಾರ್ (25) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಹುಟ್ಟು ಹಬ್ಬದ ಸಲುವಾಗಿ ಹೇಮಂತ್ ನನ್ನು ಸ್ನೇಹಿತರು ಫೋನ್ ಮಾಡಿ ಮನೆಯ ಹೊರಗಡೆ ಬರಲು ಹೇಳಿದ್ದಾರೆ. ಸ್ನೇಹಿತರೊಂದಿಗೆ ರಾತ್ರಿ ಹೊರಗಡೆ ಹೋಗಿದ್ದ ಯುವಕ ಇಂದು ಬೆಳಗ್ಗೆ ಕೋನಸಂದ್ರ ಬಳಿ ಬರ್ಬರವಾಗಿ ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಹೇಮಂತ್ ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮೃತ ಯುವಕನ ಕೈ ಮೇಲೆ ತ್ರಿಶೂಲ, ಢಮರು ಟ್ಯಾಟು ಇದ್ದು, ಇದರ ಮೂಲಕ ಪೋಷಕರು ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ. ಯುವಕನ ಮುಖದ ಗುರುತು ಸಿಗದಂತಾಗಿತ್ತು.
ಸದ್ಯ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz