ದೇವನಹಳ್ಳಿ (ಬೆಂಗಳೂರು): ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAB) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಥೈಲ್ಯಾಂಡ್ ನ ಬ್ಯಾಂಕಾಕ್ ನಿಂದ ಬಂದಿದ್ದ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದೆ.
27 ಕೆಜಿಗೂ ಹೆಚ್ಚು ಮಾದಕವಸ್ತು ಜಪ್ತಿ:
ಬ್ಯಾಂಕಾಕ್ ನಿಂದ ಎರಡು ಪ್ರತ್ಯೇಕ ವಿಮಾನಗಳಲ್ಲಿ ಬಂದಿಳಿದ ಇಬ್ಬರು ಪ್ರಯಾಣಿಕರ ಲಗೇಜ್ ಬ್ಯಾಗ್ಗಳನ್ನು ಅಧಿಕಾರಿಗಳು ಶೋಧಿಸಿದಾಗ ಈ ಕಳ್ಳಸಾಗಣೆ ಬೆಳಕಿಗೆ ಬಂದಿದೆ. ಲಗೇಜ್ಗಳಲ್ಲಿ ಬಾಂಧು ಭದ್ರಪಡಿಸಿ ಬಚ್ಚಿಡಲಾಗಿದ್ದ ಒಟ್ಟು 27 ಕೆಜಿ 600 ಗ್ರಾಂ ತೂಕದ ಹೈಡ್ರೋಪೋನಿಕ್ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಇದರ ಅಂದಾಜು ಮೌಲ್ಯ ₹9.27 ಕೋಟಿಯಿಂದ ₹9.67 ಕೋಟಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೊದಲ ಪ್ರಯಾಣಿಕ: ಲಗೇಜ್ನಿಂದ ₹5.43 ಕೋಟಿ ಮೌಲ್ಯದ 15.5 ಕೆಜಿ ಗಾಂಜಾ ವಶ.
ಎರಡನೇ ಪ್ರಯಾಣಿಕ: ₹4.24 ಕೋಟಿ ಮೌಲ್ಯದ 12.1 ಕೆಜಿ ಗಾಂಜಾ ಜಪ್ತಿ.
ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲು
ವಿದೇಶದಿಂದ ಮಾದಕ ದ್ರವ್ಯ ತರುತ್ತಿದ್ದ ಇಬ್ಬರೂ ಆರೋಪಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ತಕ್ಷಣವೇ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಬಂಧಿತರ ವಿರುದ್ಧ ಎನ್ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಈ ಮಾದಕ ವಸ್ತುಗಳನ್ನು ಬೆಂಗಳೂರಿನಲ್ಲಿ ಯಾರಿಗೆ ಪೂರೈಸಲು ತರಲಾಗುತ್ತಿತ್ತು? ಮತ್ತು ಈ ಜಾಲದ ಹಿಂದೆ ಇರುವ ಪ್ರಮುಖ ಸೂತ್ರಧಾರರು ಯಾರು ಎಂಬುದರ ಕುರಿತು ಕಸ್ಟಮ್ಸ್ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
