“ಸಿಎಸ್‌ಆರ್ ಹಣದ ಮೂಲಕ ನೂತನ ಶಾಲೆಗಳನ್ನು ನಿರ್ಮಾಣ ಮಾಡಬೇಕು ಹಾಗೂ ಸದ್ಬಳಕೆ ಹೇಗೆ ಮಾಡಬೇಕು ಎಂಬುದಾಗಿ ಸರ್ಕಾರ ಯೋಜನೆ ರೂಪಿಸುತ್ತಿದೆ. ನನ್ನದೂ 3 ಶಿಕ್ಷಣ ಸಂಸ್ಥೆಗಳಿದ್ದು ಪಂಚಾಯಿತಿ ಮಟ್ಟದಲ್ಲಿ 3 ಶಾಲೆಗಳನ್ನು ದತ್ತು ತೆಗೆದುಕೊಳ್ಳುತ್ತೇನೆ” ಎಂದು ಡಿ.ಕೆ.ಶಿವಕುಮಾರ್ ಘೋಷಿಸಿದರು.
“ಸಿಎಸ್‌ಆರ್ ಹಣವು ಕೇವಲ ನಗರೀಕರಣಕ್ಕೆ ಮಾತ್ರ ಬಳಕೆಯಾಗುತ್ತಿದೆ, ಇದನ್ನು ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಬಳಕೆ ಮಾಡಬೇಕು ಎಂಬುದು ನಮ್ಮ ಆಶಯ, ಪ್ರತಿ ಪಂಚಾಯಿತಿಯಲ್ಲಿ 3 ಶಾಲೆಗಳನ್ನು ಹೊಸದಾಗಿ ನಿರ್ಮಾಣ ಮಾಡಬೇಕು ಎಂಬುದು ನಮ್ಮ ಕನಸಾಗಿದೆ ಅದಕ್ಕೆ ಹಣದ ಸದ್ಬಳಕೆ ಕುರಿತು ಸಭೆ ನಡೆಸಲಾಯಿತು” ಎಂದು ಮಾಹಿತಿ ನೀಡಿದರು.
ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಅವರ ಶಾಲೆಯ ಅಧ್ಯಾಪಕರನ್ನೇ ಗ್ರಾಮೀಣ ಭಾಗದ ಶಾಲೆಗಳಿಗೆ ಕಳುಹಿಸಿ ಪಾಠ ಮಾಡಬೇಕು. ಅಂತರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ನಮ್ಮ ಕರ್ನಾಟಕದ ಪ್ರತಿ ಗ್ರಾಮೀಣ ಮಕ್ಕಳಿಗೂ ದೊರೆಯಬೇಕು. ಎಂಬುದು ನಮ್ಮ ಸರ್ಕಾರದ ಮಹತ್ವದ ಯೋಚನೆ ಮತ್ತು ಯೋಜನೆ” ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


