ಬಾಕಿ ಬಿಲ್ ಪಾವತಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನುವ ಗುತ್ತಿಗೆದಾರರ ಆರೋಪಕ್ಕೆ ಸಂಬಂಧಿಸಿದಂತೆ ಇದಕ್ಕೆ ಸ್ವತಃ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಯಾವ ಬಿಲ್ ವಿಚಾರವೂ ಗೊತ್ತಿಲ್ಲ. ಯಾರಿಗೂ ಉತ್ತರ ಕೊಡಲ್ಲ. ನನಗೂ ಪ್ರಜ್ಞೆ ಇದೆ. ನನಗೂ ರಾಜಕಾರಣ ಗೊತ್ತಿದೆ. ಯಾವ ಗುತ್ತಿಗೆದಾರನ ಹಿಂದೆ ಯಾರಿದ್ದಾರೆಂದು ನನಗೂ ಗೊತ್ತಿದೆ ಎಂದಿದ್ದಾರೆ.
ಯಾವ ಬ್ಲ್ಯಾಕ್ಮೇಲ್ ಕೂಡ ನನ್ನ ಮುಂದೆ ನಡೆಯುವುದಿಲ್ಲ. ನಾವು ವಿಪಕ್ಷದಲ್ಲಿದ್ದಾಗ ನಮ್ಮ ಬಳಿ ಹುಡುಕಿಕೊಂಡು ಬರುತ್ತಿರಲಿಲ್ವಾ? ನಾನು ಯಾರಿಗೂ ಪ್ರಮಾಣ ಮಾಡಬೇಕಾದ ಅವಶ್ಯಕತೆ ಇಲ್ಲ. ಕೆಲಸ ಮಾಡಿದ್ರೆ ಹಣ ಬಿಡುಗಡೆ ಆಗುತ್ತೆ. ಇಲ್ಲದಿದ್ದರೆ ಆಗುವುದಿಲ್ಲ. ಯಾರಿಗೋ ಬ್ಲ್ಯಾಕ್ಮೇಲ್ ಮಾಡಿದಂತೆ ನನಗೆ ಮಾಡಲು ಬರಬೇಡಿ ಎಂದು ಖಡಕ್ ಆಗಿ ತಿರುಗೇಟು ನೀಡಿದರು.
ಒಂದೇ ವಾರದಲ್ಲಿ ಹಣ ಬಿಡುಗಡೆ ಆಗುತ್ತಾ? ಯಾವ ಒತ್ತಡ ಇದ್ದರೂ ತಡೆದುಕೊಳ್ಳಲು ರೆಡಿ. ಯಾರಿಗೋ ಬ್ಲ್ಯಾಕ್ಮೇಲ್ ಮಾಡುವಂತೆ ನನಗೆ ಮಾಡಲು ಬರಬೇಡಿ. ನನಗೆ ಬೆದರಿಕೆ ಹಾಕಿದ್ರೆ ಕೇಳ್ತೀನಾ.? ಬಿಜೆಪಿ ವಿರುದ್ಧ ನಾವು ಆರೋಪ ಮಾಡಿದ್ದು ಸತ್ಯ. ಲೆಟರ್ ಕೊಟ್ಟಿದ್ದು ಸತ್ಯ. ಅಶ್ವಥ್ ನಾರಾಯಣ್, ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲರೂ ತನಿಖೆ ಮಾಡಿ ಅಂತ ಸದನದಲ್ಲಿ ಹೇಳಿದ್ದು ಸತ್ಯ ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


