nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026
    Facebook Twitter Instagram
    ಟ್ರೆಂಡಿಂಗ್
    • ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ
    • ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
    • ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ
    • ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    • ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
    • KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
    ಪಾವಗಡ June 3, 2026

    ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್

    By adminJune 3, 2026No Comments2 Mins Read

    ಪಾವಗಡ:  ರಾಜ್ಯದಲ್ಲಿ ನೂತನವಾಗಿ ಪ್ರಮಾಣ ಸ್ವೀಕಾರ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ  ಸಚಿವ ಸಂಪುಟದ ಕಸರತ್ತು ಬಿರುಸುಗೊಳ್ಳುತ್ತಿರುವ ಬೆನ್ನಲ್ಲೇ, ಹಿಂದುಳಿದ ಗಡಿ ತಾಲ್ಲೂಕಾದ ಪಾವಗಡದ ಶಾಸಕ ಎಚ್.ವಿ. ವೆಂಕಟೇಶ್ ಸಚಿವ ಸ್ಥಾನದ ಆಕಾಂಕ್ಷಿ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದಾರೆ. “ಯುವ ಸಚಿವರ ಕೋಟಾದಡಿಯಲ್ಲಿ ನನಗೆ ಸಚಿವ ಸ್ಥಾನದ ಜವಾಬ್ದಾರಿ ಒದಗಿಸಬೇಕು” ಎಂದು ಪಕ್ಷದ ಹೈಕಮಾಂಡ್ ಅವರನ್ನು ಬಲವಾಗಿ ಒತ್ತಾಯಿಸಿದ್ದಾರೆ.

    ಪಟ್ಟಣದ ಎಪಿಎಂಸಿ ಮೈದಾನದಲ್ಲಿ ರೈತರಿಗೆ ರಿಯಾಯಿತಿ ದರದಲ್ಲಿ ಶೇಂಗಾ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಿತ್ತನೆ ಬೀಜಗಳಾದ ಶೇಂಗಾ,ತೊಗರಿ, ಅಲಸಂದೆ ಮತ್ತು ಬತ್ತದ ಬೀಜಗಳನ್ನು ವಿತರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸತತ 14 ವರ್ಷಗಳ ಕಾಲ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ತಳಮಟ್ಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ. ಎರಡು ಬಾರಿ ಜಿಲ್ಲಾ ಪಂಚಾಯತಿ ಸದಸ್ಯನಾಗಿ ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ, ಆ ಅನುಭವ  ನನಗಿದೆ. 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅತ್ಯಂತ ಕಡಿಮೆ ಮತಗಳ ಅಂತರದಿಂದ ಪರಾಭವಗೊಂಡಿದ್ದರೂ, ಧೃತಿಗೆಡದೆ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೆ. ನನ್ನ ನಿರಂತರ ಶ್ರಮವನ್ನು ಗುರುತಿಸಿ ಕ್ಷೇತ್ರದ ಜನತೆ ಈ ಬಾರಿ ನನ್ನನ್ನು ಶಾಸಕನಾಗಿ ಆರಿಸಿದ್ದಾರೆ. ಹೀಗಾಗಿ ಸಹಜವಾಗಿಯೇ ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ, ನಮ್ಮ ತಂದೆಯವರು ಈ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಲ್ಲದೆ, ಎರಡು ಬಾರಿ ಸಚಿವರಾಗಿ ರಾಜ್ಯ ಮತ್ತು ಕ್ಷೇತ್ರಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ. ಅವರ ಜನಪರ ಆಡಳಿತವೇ ನನಗೆ ಪ್ರೇರಣೆ. ಯುವ ಶಾಸಕರಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ನನ್ನ ಸೇವೆಯನ್ನು ಪರಿಗಣಿಸಬೇಕು, ಈ ವಿಷಯವಾಗಿ ನಾನು ಶೀಘ್ರದಲ್ಲೇ ಸಿಎಲ್‌ ಪಿ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಖುದ್ದಾಗಿ ಭೇಟಿಯಾಗಿ ಮನವಿ ಸಲ್ಲಿಸಲಿದ್ದೇನೆ, ಸುಮಾರು 15ಕ್ಕೂ ಹೆಚ್ಚು ಶಾಸಕರು ನನ್ನ ಬೇಡಿಕೆಗೆ ಬೆಂಬಲ ಸೂಚಿಸಿದ್ದಾರೆ, ಪಕ್ಷದ ಹೈಕಮಾಂಡ್ ನನ್ನ ನಿಷ್ಠೆ ಮತ್ತು ಸಂಘಟನಾ ಚಾತುರ್ಯವನ್ನು ನಂಬಿ ಸಚಿವ ಸ್ಥಾನದ ಜವಾಬ್ದಾರಿ ನೀಡಿದರೆ, ಅತ್ಯಂತ ಪ್ರಾಮಾಣಿಕತೆಯಿಂದ ಮತ್ತು ಕರ್ತವ್ಯನಿಷ್ಠೆಯಿಂದ ಕೆಲಸ ಮಾಡಲು ನಾನು ಸಿದ್ಧನಾಗಿದ್ದೇನೆ ಎಂದು ತಿಳಿಸಿದರು.


    Provided by
    Provided by

    ಈ ಸಂದರ್ಭದಲ್ಲಿ. ರೈತ ಸಂಘದ ಅಧ್ಯಕ್ಷ ಪೂಜಾರಪ್ಪ, ಹಾಗೂ ನರಸಿಂಹರೆಡ್ಡಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಅಜಯ್ ಕುಮಾ‌ರ್, ಪುರಸಭಾ ಮಾಜಿ ಅಧ್ಯಕ್ಷರಾದ ಸುದೇಶ್‌ ಬಾಬು,ಪಿ ಹೆಚ್ ರಾಜೇಶ್,ಶಂಕರ್ ರೆಡ್ಡಿ,ಗುತ್ತಿಗೆದಾರರಾದ ಆರ್.ಎ ಹನುಮಂತರಾಯಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷರಾದ ಡಿ ಮಂಜುನಾಥ್,ಕಲ್ಪವೃಕ್ಷ ರವಿ, ಶಿವಮೂರ್ತಿ ರವರು ಸೇರಿ ಇನ್ನೂ ಹಲವರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026

    ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ

    June 12, 2026

    ಪಾವಗಡದಲ್ಲಿ ಬಾಕಿ ವಿದ್ಯುತ್ ಬಿಲ್ ವಸೂಲಿ ಆಂದೋಲನ: ಬಿಲ್ ಪಾವತಿಸದಿದ್ದರೆ ಸಂಪರ್ಕ ಕಡಿತ ಎಚ್ಚರಿಕೆ

    June 12, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಮಂತ್ರಾಲಯ:  ಇಲ್ಲಿನ ಪ್ರಸಿದ್ಧ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಇದೇ ಜೂನ್ 26ರಂದು ಅತ್ಯಂತ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿರುವ “ರಾಯರ…

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026

    ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.