ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಬೇಕೆಂಬ ಆಸೆ ನನಗೂ ಇದೆ, ಒಂದು ದಿನ ಡಿ.ಕೆ.ಶಿವಕುಮಾರ್ ಶ್ರಮಕ್ಕೆ ಪ್ರತಿಫಲ ಸಿಗಲಿದೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʻಐ ಹ್ಯಾವ್ ನೋ ಅದರ್ ಆಪ್ಷನ್ʼ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಒಬ್ಬ ಶಿಸ್ತಿನ ಸಿಪಾಯಿ. ಇದನ್ನ ಹಿಂದೆಯೂ ಹೇಳಿದ್ದಾರೆ, ಈಗಲೂ ಹೇಳಿದ್ದಾರೆ.. ಮುಂದೆಯೂ ಹೇಳುತ್ತಾರೆ. ಪಕ್ಷದ ಶಿಸ್ತನ್ನ ಪಾಲಿಸಿದ್ದಾರೆ. ಡಿ.ಕೆ ಶಿವಕುಮಾರ್ ರದ್ದು ಅಸಹಾಯಕತೆ ಅಲ್ಲ. ಪಕ್ಷಕ್ಕೆ ಗೌರವ ಕೊಡೋದು, ನಾಯಕತ್ವಕ್ಕೆ ಗೌರವ ಕೊಡೋದು. ಪಕ್ಷದ ಅಧ್ಯಕ್ಷರಾಗಿ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ನನಗೂ ಅವರು ಸಿಎಂ ಆಗಬೇಕು ಎಂಬ ಆಸೆ ಇದೆ. ಯಾವಾಗ ಏನು ಎಂಬುದನ್ನ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದರು.
ಐದು ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ ಅವರು , ಸಿಎಂ ಹೇಳಿರೋದ್ರಲ್ಲಿ ತಪ್ಪೇನಿದೆ? ಸಿಎಂ ಆಗಿರೋರು ಸಿಎಂ ಆಗಿ ಮುಂದುವರೆಯುತ್ತೇನೆ ಅಂದ್ರೆ ತಪ್ಪೇನು? ಅವರು ಶಾಸಕಾಂಗ ಪಕ್ಷದ ನಾಯಕರು ಎಂದು ಸಮರ್ಥಿಸಿಕೊಂಡರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC