ಲೋಕಸಭೆ ಚುನಾವಣೆಗೆ ಬಿಜೆಪಿ–ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ, ಹಾಸನ, ಕೋಲಾರ ಕ್ಷೇತ್ರವನ್ನು ಬಿಜೆಪಿಯು ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ. ಈ ಸಂಬಂಧ ಇಂದು ಅರಮನೆ ಮೈದಾನದ ಸಭಾಂಗಣದಲ್ಲಿ ಬಿಜೆಪಿ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಘೋಷಣೆ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಕೋಲಾರ ಕ್ಷೇತ್ರದ ಟಿಕೆಟ್ ಕೈತಪ್ಪಿರುವ ಕುರಿತು ಮಾತನಾಡಿರುವ ಹಾಲಿ ಸಂಸದ ಮುನಿಸ್ವಾಮಿ, ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷೇತರವಾಗಿ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರ ಗುರಿ ಮತ್ತು ಉದ್ದೇಶ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿಯನ್ನಾಗಿ ನೋಡುವುದು, ಹಿಂದೂ ವಿರೋಧಿ, ಧರ್ಮ ವಿರೋಧಿ, ರಾಷ್ಟ್ರ ವಿರೋಧಿ ಹಾಗೂ ಕೇವಲ ಒಂದು ಸಮುದಾಯನ್ನು ಓಲೈಸುವುದೇ ರಾಜಕಾರಣ ಅಂತ ಭಾವಿಸಿರುವ ಕಾಂಗ್ರೆಸ್ ಪಕ್ಷವನ್ನು ಸೋಲಿಸುವುದಾಗಿದೆ ಎಂದು ಮುನಿಸ್ವಾಮಿ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


