ಬೆಂಗಳೂರು: ನನ್ನಿಂದ ಏನನ್ನೂ ವಶಕ್ಕೆ ಪಡೆಯದಿದ್ದರೂ ತಪ್ಪಾಗಿ ಬಿಂಬಿಸಲಾಗುತ್ತಿದೆ, ನಾನು ಮುಗ್ದೆ ಎಂದು ನಟಿ ರನ್ಯಾ ರಾವ್ ಹೇಳಿದ್ದು, ಬೆಂಗಳೂರು ಸೆಂಟ್ರಲ್ ಜೈಲಿನಿಂದ ಮಾರ್ಚ್ 6 ರಂದು ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್ ಐ) ಹೆಚ್ಚುವರಿ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.
ಇತರ ಕೆಲ ಪ್ರಯಾಣಿಕರನ್ನು ರಕ್ಷಿಸಲು ನನ್ನನ್ನು ಸುಳ್ಳು ಕೇಸ್ ನಲ್ಲಿ ಸಿಲುಕಿಸಲಾಗಿದೆ. ಅಧಿಕಾರಿಗಳು ಹೇಳಿದಂತೆ ಯಾವುದೇ ಮಹಜರ್ ಮಾಡಿಲ್ಲ ಅಥವಾ ಯಾವುದೇ ಶೋಧ ಕಾರ್ಯ ನಡೆದಿಲ್ಲ. ನನ್ನಿಂದ ಏನನ್ನೂ ವಶಕ್ಕೆ ಪಡೆದಿಲ್ಲ ಎಂದು ಅವರು ಹೇಳಿದ್ದಾರೆ.
ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಆಕೆಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನಂತರ ಕಾರಾಗೃಹ ಇಲಾಖೆಯ ಮೂಲಕ ಡಿಆರ್ ಐಗೆ ಸಲ್ಲಿಸಿದ ಪತ್ರ ಹೆಚ್ಚು ಸುದ್ದಿಯಾಗುತ್ತಿದೆ. ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರದ ಸತ್ಯಾಸತ್ಯತೆಯನ್ನು ಖಚಿತಪಡಿಸಲು ಸಾಧ್ಯವಾಗಲಿಲ್ಲ. ಬೆಂಗಳೂರು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೆ ಸುರೇಶ್ ಅವರು ಮಾರ್ಚ್ 7 ರಂದು ರನ್ಯಾ ಬರೆದ ಪತ್ರವನ್ನು ಡಿಆರ್‌ಐಗೆ ಕಳುಹಿಸಿದ್ದಾರೆ. ಆಂಗ್ಲ ಭಾಷೆಯಲ್ಲಿ ಬರೆದಿರುವ ನಾಲ್ಕು ಪುಟಗಳ ಪತ್ರವನ್ನು ಅವರು ಬರೆದಿದ್ದಾರೆನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4