ಮೈಸೂರು: ಮುಡಾ ವಿಚಾರದಲ್ಲಿ ನನಗೆ ಬೇಜಾರಿಲ್ಲ, ಯಾಕೆಂದರೆ ನಾನು ತಪ್ಪು ಮಾಡಿಲ್ಲ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿಯವರು ಸಾಕಷ್ಟು ಹಗರಣ ಮಾಡಿದ್ದಾರೆ. ಬಿಜೆಪಿಯವರು ಒಂದೇ ಒಂದು ತನಿಖೆಯನ್ನು ನ್ಯಾಯಾಂಗಕ್ಕೆ ಕೊಟ್ಟಿಲ್ಲ ಎಂದಿರುವ ಅವರು, 40 ವರ್ಷದ ರಾಜಕಾರಣದಲ್ಲಿ ನಾನು ಯಾವುದೇ ಹಗರಣ ಮಾಡಿಲ್ಲ. ನನ್ನ ಹೆಸರಿಗೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ ಎಂದರು.
ಮೂಡಾ ಪ್ರಕರಣದಲ್ಲಿ ನಿವೇಶನಗಳನ್ನು ಸಿಎಂ ಹಿಂದಿರುಗಿಸಿ ತನಿಖೆಗೆ ಅವಕಾಶ ಕೊಡಬೇಕೆಂದು ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮೂಡಾ ಪ್ರಕರಣದಲ್ಲಿ ನನ್ನ ಮೇಲೆ ಯಾವ ಕಪ್ಪು ಮಸಿಯೂ ಇಲ್ಲ. ಈ ಬಗ್ಗೆ ನ್ಯಾಯಾಂಗ ಆಯೋಗ ರಚನೆಯಾಗಿದೆ. ಬಿಜೆಪಿ ಯಾವುದೇ ನ್ಯಾಯಾಂಗ ತನಿಖೆ ರಚಿಸಿತ್ತೆ ಎಂದು ಪ್ರಶ್ನಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA