ಬೆಂಗಳೂರು: ಮುಡಾ ಹಗರಣ ವಿಚಾರವಾಗಿ ಪಾದಯಾತ್ರೆಯಲ್ಲಿ ನಾನು ಭಾಗಿಯಾಗಿದ್ದು ನಿಜ. ಆದರೆ, ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಮುಡಾ ಹಗರಣ ಪ್ರಾಸಿಕ್ಯೂಶನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದ ಸಿದ್ದರಾಮಯ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಮಾಧ್ಯಮಗಳ ಪ್ರಶ್ನೆಗಳಿಗೆ ಕುಮಾರಸ್ವಾಮಿ ಅಚ್ಚರಿಯ ಉತ್ತರ ನೀಡಿದ್ದಾರೆ.
ನಾನು ಅಂದು ಕೂಡ ಸಿದ್ದರಾಮಯ್ಯನವರ ರಾಜೀನಾಮೆ ಕೇಳಿರಲಿಲ್ಲ, ಈಗಲೂ ಕೇಳುವುದಿಲ್ಲ. ದೇಶದ ಕಾನೂನು ಎಲ್ಲರಿಗೂ ರಕ್ಷಣೆ ಕೊಡುತ್ತದೆ. ಹಾಗೆಂದು ಕಾನೂನು ಬಾಹಿರ ಚಟುವಟಿಕೆ ಮಾಡಿದ್ದರೆ, ನ್ಯಾಯಾಲಯ ಕಾನೂನು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.
ಬಿಜೆಪಿ ಜೊತೆಗಿನ ಪಾದಯಾತ್ರೆಯ ವೇಳೆಯಲ್ಲೂ ಜೆಡಿಎಸ್ ಪಾದಯಾತ್ರೆಯಲ್ಲಿ ಭಾಗಿಯಾಗಲು ಹಿಂದೇಟು ಹಾಕಿತ್ತು. ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿಯ ಒತ್ತಡಕ್ಕೆ ಪಾದಯಾತ್ರೆಯಲ್ಲಿ ಭಾಗಿಯಾದಂತಿತ್ತು. ಇದೀಗ ಅವರು ಸಿದ್ದರಾಮಯ್ಯನವರ ರಾಜೀನಾಮೆ ಕೇಳುವುದಿಲ್ಲ ಎನ್ನುವ ಪ್ರತಿಕ್ರಿಯೆ ನೀಡಿರುವುದು ರಾಜಯಕೀಯ ವಲಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q