ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ಮೊದಲ ಬಾರಿಗೆ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಎರಡನೇ ಭಾರೀ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಆಯ್ಕೆಯಾಗಿದ್ದಾರೆ.
ಗೆಲುವಿನ ಬಳಿಕ ಮಾತನಾಡಿದ ಒಮರ್ ಅಬ್ದುಲ್ಲಾ, ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿ ಕೇಂದ್ರ ಸರ್ಕಾರ ಒಳ್ಳೆಯ ಕೆಲಸ ಮಾಡಿದೆ. ಪ್ರಧಾನಿ ಮೋದಿ ಗೌರವಾನ್ವಿತ ವ್ಯಕ್ತಿ, ಮತ್ತೆ ಅದನ್ನು ಮರಳಿ ಸ್ಥಾಪಿಸುವಂತಹ ಮೂರ್ಖ ಕೆಲಸ ಮಾಡುವುದಿಲ್ಲ ಎಂದಿದ್ದಾರೆ.
ಕಾಂಗ್ರೆಸ್ ಈ ಹಿಂದೆ ಜಮ್ಮು ಕಾಶ್ಮೀರದ ರ್ಯಾಲಿಯಲ್ಲಿ ಆರ್ಟಿಕಲ್ 370 ಮರಳಿ ಸ್ಥಾಪಿಸುವುದಾಗಿ ಹೇಳಿತ್ತು. ಆದರೆ ಇದೀಗ ನೂತನ ಸಿಎಂ ಇದಕ್ಕೆ ಹಿಂದೇಟು ಹಾಕಿದ್ದು, ಕೇಂದ್ರದ ಜೊತೆ ಸೇರಿ ಕೆಲಸ ಮಾಡುವುದಾಗಿ ಒಮರ್ ಸ್ಪಷ್ಟನೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296