ಮೈಸೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೊಂಡಿದ್ದಾರೆ.
ನಾನಾ ಅಭ್ಯರ್ಥಿ ಎಂದಿರುವ ಡಿ.ಕೆ.ಶಿವಕುಮಾರ್ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷದಿಂದ ಯಾರು ಬೇಕಾದರೂ ನಿಲ್ಲಲಿ ಎಂದು ಸವಾಲು ಹಾಕಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಎಂಪಿ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಹಿನ್ನಡೆ ಆಗಿತ್ತು. ಎಂಎಲ್ ಎ ಚುನಾವಣೆಯಲ್ಲಿಯೂ ಹೆಚ್ಚು ಹಿನ್ನಡೆಯಾಗಿತ್ತು. ಈಗ ನಮ್ಮ ಬೇಸ್ ಸ್ಟ್ರಾಂಗ್ ಮಾಡುತ್ತಿದ್ದೇವೆ. ಜನ ಓಟ್ ಹಾಕಿ ಗೆಲ್ಲಿಸುತ್ತಾರೆಂಬ ನಂಬಿಕೆ ನನಗಿದೆ ಎಂದರು.
ಇದೇ ವೇಳೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಮಾತನಾಡಿದ ಅವರು, ‘ಇನ್ನೂ ಹತ್ತು ವರ್ಷ ಅವರೇ ಸಿಎಂ ಆಗಿ ಇರುತ್ತಾರೆ. ಬಿಜೆಪಿಯವರು ಇನ್ನೂ ಹತ್ತು ವರ್ಷ ಇದೇ ರೀತಿ ಹೇಳ್ತಾನೇ ಇರ್ತಾರೆ’ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296