ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಘಟನೆಯಿಂದ ತುಂಬಾ ಡಿಸ್ಟರ್ಬ್ ಆಗಿದ್ದೇನೆ, ನನ್ನ ರಾಜಕೀಯ ಬದುಕಿನಲ್ಲೇ ಬಹಳ ದು:ಖ ಕೊಟ್ಟಂತಹ ಘಟನೆಯಿದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮುಂಗಾರು ಅಧಿವೇಶನದ ಕೊನೆಯ ದಿನವಾದ ಇಂದು ವಿಧಾನಸಭೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳಿಗೆ ಅವರು ಉತ್ತರಿಸುತ್ತಿದ್ದರು.
ಈ ಪ್ರಕರಣದಲ್ಲಿ ಸರ್ಕಾರದ ಪಾತ್ರ ಇಲ್ಲ, ಇದಕ್ಕೆ ಸರ್ಕಾರ ಕಾರಣ ಅಲ್ಲ, ಯಾರೂ ರಾಜೀನಾಮೆ ಕೊಡಲ್ಲ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ ಎಂದು ಸ್ಪಷ್ಟನೆ ಕೊಟ್ಟರು.
ಬಿಜೆಪಿಯವರ ಸಾರ್ವಜನಿಕ ಕ್ಷಮಾಪಣೆಯ ಆಗ್ರಹ ತಳ್ಳಿಹಾಕಿದ ಸಿಎಂ ಸದನದಲ್ಲಿ ಮತ್ತೊಮ್ಮೆ ಘಟನೆಗೆ ವಿಷಾದ ವ್ಯಕ್ತಪಡಿಸಿದರು.
ಸಿಎಂ ಅವರು, ನನಗೆ ಈ ಘಟನೆ ತುಂಬಾ ಡಿಸ್ಟರ್ಬ್ ಮಾಡಿದೆ. ಇಂಥ ದುರಂತ ಆಗಬಾರದಿತ್ತು, ಆಗಿಹೋಗಿದೆ. ನಾನು ಘಟನೆ ನಡೆದ ದಿನವೇ ವಿಷಾದ ವ್ಯಕ್ತಪಡಿಸಿದ್ದೆ. ನನ್ನ ರಾಜಕೀಯ ಜೀವನದಲ್ಲಿ ಇಂಥ ಕಹಿ ಘಟನೆ ಯಾವತ್ತೂ ಆಗಿರಲಿಲ್ಲ. ಕಾಲ್ತುಳಿತದಿಂದ 11 ಜನರ ಸಾವನ್ನು ನಾನು ನೋಡೇ ಇರಲಿಲ್ಲ. ದುರ್ಘಟನೆಗೆ ನಾನು ತುಂಬಾ ದು:ಖಪಟ್ಟಿದ್ದೇನೆ. ವಿಷಾದ ವ್ಯಕ್ತಪಡಿಸಿದ್ದೇನೆ. ಮನುಷ್ಯತ್ವ ಇರೋರಿಗೆ ದು:ಖ ಆಗೇ ಆಗುತ್ತೆ, ನನಗೂ ಆಗಿದೆ ಎಂದು ಭಾವುಕರಾಗಿ ನುಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC