ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಆದ ಡಿಫರೆಂಟ್ ಶೈಲಿಯ ವಿಡಿಯೋ ಮಾಡುತ್ತಿದ್ದ ನಾನು ನಂದಿನಿ ಖ್ಯಾತಿಯ ವಿಕ್ಕಿಪೀಡಿಯಾ ವಿಕಾಸ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ತಮ್ಮದೇ ಆದ ಖ್ಯಾತಿ ಪಡೆದಿರುವ ವಿಕಾಸ್, ವಿಕ್ಕಿಪೀಡಿಯಾ ಅಂತಾಲೇ ಫುಲ್ ಫೇಮಸ್ ಆಗಿದ್ದಾರೆ. ಕಾಮಿಡಿ ವಿಡಿಯೋಗಳು, ಹಾಡುಗಳು ಹಾಗೂ ಸಾಮಾಜಿಕ ಕಳಕಳಿ ಇರುವಂತಹ ವಿಡಿಯೋಗಳನ್ನು ಮಾಡುವ ಇವರು ನಾನು ನಂದಿನಿ ಬೆಂಗಳೂರಿಗೆ ಬಂದಿನಿ ಎನ್ನುವ ಹಾಡಿನ ಮೂಲಕ ಸಖತ್ ವೈರಲ್ ಆಗಿದ್ದರು. ಜೊತೆಗೆ ಕರಿಮಣಿ ಮಾಲೀಕ ರಾಹುಲ್ಲಾ ಎನ್ನುವ ಇವರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ನಿರೀಕ್ಷೆಗೂ ಮೀರಿ ಹಿಟ್ ಆಗಿತ್ತು.
ಇದೀಗ ಅದೇ ರೀತಿ ಜನರನ್ನು ನಗಿಸಲು ಹೋಗಿ ವಿಕ್ಕಿಪೀಡಿಯಾ ವಿಕಾಸ್ ಪೊಲೀಸ್ ಠಾಣೆ ಮೆಟ್ಟಿಲೇರುವಂತೆ ಆಗಿದೆ. ಅಮಿತ್ ಜೊತೆಗೆ ವಿಕಾಸ್ ಮಾಡಿದ್ದ ಹೊಸ ವಿಡಿಯೋವನ್ನು ಎರಡು ಮೂರು ದಿನಗಳ ಹಿಂದೆ ಅಪ್ಲೋಡ್ ಮಾಡಲಾಗಿತ್ತು. ಈ ವಿಡಿಯೋದಲ್ಲಿ ಖುಷಿಗಾಗಿ ಡ್ರಗ್ಸ್ ಎನ್ನುವ ವಾಕ್ಯವೊಂದನ್ನು ಬಳಸಲಾಗಿತ್ತು. ಸದ್ಯ ಆ ವಿಡಿಯೋವನ್ನು ಡಿಲೀಟ್ ಮಾಡಲಾಗಿದ್ದು, ಪೊಲೀಸರು ವಿಕಾಸ್‌ಗೆ ಎಚ್ಚರಿಕೆ ಕೊಟ್ಟು ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
ವಿಡಿಯೋವೊಂದರಲ್ಲಿ ಮಾದಕ ವಸ್ತು ವ್ಯಸನದ ಬಗ್ಗೆ ಮಾತನಾಡಿದ ಆರೋಪದ ಮೇಲೆ ವಿಕಾಸ್ ಅವರನ್ನು ಬೈಯಪ್ಪನಹಳ್ಳಿ ಪೊಲೀಸರು, ಠಾಣೆಗೆ ಕರೆದು ವಿಚಾರಣೆ ನಡೆಸಿ ಬಳಿಕ ಎಚ್ಚರಿಕೆಯನ್ನು ನೀಡಿ ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ ವಿಡಿಯೋ ಮಾಡುವಾಗ ಅನುಸರಿಸಬೇಕಾದ ಕೆಲವು ಸೂಚನೆಗಳನ್ನು ಪೊಲೀಸರು ವಿಕಾಸ್‌ಗೆ ನೀಡಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


