ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನನಗೆ ಈ ಬಾರಿ ಬೆಳಗಾವಿಯಿಂದ ಟಿಕೆಟ್ ಸಿಕ್ಕೇ ಸಿಗುತ್ತದೆ. ನಾನು ಅಲ್ಲಿಂದಲೇ ಸ್ಪರ್ಧಿಸಲಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಧಾರವಾಡದಿಂದ ಟಿಕೆಟ್ ಸಿಗುವ ಬಗ್ಗೆ ಶೆಟ್ಟರ್ ಮೊದಲು ವಿಶ್ವಾಸ ಹೊಂದಿದ್ದರು. ಆದರೆ ಟಿಕೆಟ್ ಕೈತಪ್ಪಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಲಭಿಸಿದೆ. ಭಾರೀ ನಿರಾಸೆಯ ಬಳಿಕ ಇದೀಗ ಶೆಟ್ಟರ್ ತಮಗೆ ಬೆಳಗಾವಿಯಿಂದ ಟಿಕೆಟ್ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳನ್ನು ಫೈನಲ್ ಮಾಡುತ್ತಾರೆ. ಬೆಳಗಾವಿಯಿಂದ ನನಗೆ ಟಿಕೆಟ್ ಸಿಗುತ್ತದೆ. ಅಲ್ಲಿಂದ ನಾನು ಸ್ಪರ್ಧೆ ಮಾಡೇ ಮಾಡುತ್ತೇನೆ. ಇದರಲ್ಲಿ ಯಾವುದೇ ಸಂಶಯ ಬೇಡ. ಈಗಾಗಲೇ ಬೆಳಗಾವಿಯ ಪ್ರಮುಖರ ಜೊತೆ ಎರಡ್ಮೂರು ಬಾರಿ ಮಾತನಾಡಿದ್ದೇನೆ. ಎಲ್ಲರೂ ಸೇರಿ ಚುನಾವಣೆ ಮಾಡೋಣ ಎಂದು ಹೇಳಿದ್ದಾರೆ ಎಂದು ತಿಳಿಸಿದರು.
ಅಧಿಕೃತವಾಗಿ ಟಿಕೆಟ್ ಘೋಷಣೆಯ ನಂತರ ಬೆಳಗಾವಿಗೆ ಬರುವಂತೆ ಅಲ್ಲಿನ ಮುಖಂಡರು ಹೇಳಿದ್ದಾರೆ. ಟಿಕೆಟ್ ಘೋಷಣೆ ಆಗುತ್ತಿದ್ದಂತೆ ಬೆಳಗಾವಿಗೆ ಹೋಗಿ ಪ್ರಚಾರ ಪ್ರಾರಂಭಿಸುತ್ತೇನೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


