ಬೆಂಗಳೂರು: ಬಿ.ವೈ. ವಿಜಯೇಂದ್ರ ಹಾಗೂ ಕುಮಾರಸ್ವಾಮಿ ತಮ್ಮನ್ನು ಸೋಲಿಸಲು ಸಾಧ್ಯವಿಲ್ಲ. ಅದನ್ನ ತೀರ್ಮಾನ ಮಾಡಬೇಕಾಗಿರೋದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜನ ಎಂದು ಸಂಸದ ಡಿ.ಕೆ.ಸುರೇಶ್ ತಿರುಗೇಟು ನೀಡಿದ್ದಾರೆ.
ಕುಮಾರಸ್ವಾಮಿ-ವಿಜಯೇಂದ್ರ 28ಕ್ಕೆ 28 ಕ್ಷೇತ್ರ ಗೆಲ್ಲುತ್ತೇವೆ. ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಅನ್ನ ಸೋಲಿಸುತ್ತೇವೆ ಎಂಬ ವಿಜಯೇಂದ್ರ ಹೇಳಿಕೆ ನೀಡಿದ ವಿಚಾರಕ್ಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.
ಯಾವ ಕ್ಷೇತ್ರದಲ್ಲಿ ಯಾರು ಸ್ಪರ್ಧಿಸಬೇಕು ಎನ್ನುವುದನ್ನು ನಾವೇ ತೀರ್ಮಾನ ಮಾಡುವುದಕ್ಕೆ ಆಗುವುದಿಲ್ಲ. ಅದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಅವರೆಲ್ಲಿ ಸ್ಪರ್ಧಿಸಿ ಎಂದು ಟಿಕೇಟ್ ನೀಡುತ್ತಾರೋ ಅಲ್ಲಿ ಸ್ಪರ್ಧಿಸುತ್ತೇನೆ ಎಂದು ಸುದ್ದಿಗಾರರ ಪ್ರಶ್ನೆಗೆ ಡಿಕೆಶಿ ಉತ್ತರಿಸಿದರು.


