ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಅವರ ಜೀವನ ಪಯಣದ ಕುರಿತ ಪುಸ್ತಕ ‘ಎ ಸಿಂಬಲ್ ಆಫ್ ಲಾಯಲ್ಟಿ ಡಿ.ಕೆ. ಶಿವಕುಮಾರ್’ ಬಿಡುಗಡೆಯಾಗಿದೆ. ನಿರ್ದೇಶಕ ಕೆ.ಎಂ.ರಘು ರಚಿಸಿರುವ ಪುಸ್ತಕ ಬೆಂಗಳೂರಿನ ಎಫ್ ಕೆಸಿಸಿಐ ಸಭಾಂಗಣದಲ್ಲಿ ನಿನ್ನೆ ಲೋಕಾರ್ಪಣೆಗೊಂಡಿತು.
ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಸಹಜವಾಗಿ ಡಿ.ಕೆ.ಶಿವಕುಮಾರ್ ಮನಸ್ಸು ಬಿಚ್ಚಿ ಮಾತನಾಡಿದ್ದಾರೆ. ಡಿ.ಕೆ.ಶಿವಕುಮಾರ್ ಆಗಾಗ ಹಿಂದುತ್ವದ ಬಗ್ಗೆ ಮೃಧು ಧೋರಣೆ ತಳೆಯುತ್ತಾರೆ, ಬಿಜೆಪಿಗೆ ಹೋಗಲು ಅವರಿಗೆ ಆಫರ್ ಇದೆ, ಅವರಿಗೂ ಮನಸ್ಸಾಗಿತ್ತು ಎಂಬ ಮಾತುಗಳು ಬಿಜೆಪಿ ನಾಯಕರಿಂದ ಈ ಹಿಂದೆ ಕೇಳಿಬಂದಿದ್ದವು. ಒಮ್ಮೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಈ ಬಗ್ಗೆ ಹೇಳಿದ್ದರು.
ಕೇಸರಿ ಪಕ್ಷದಿಂದ ನನಗೆ ಆಫರ್ ಬಂದಿದ್ದು ನಿಜ ಎಂದು ಸ್ವತಃ ಡಿ ಕೆ ಶಿವಕುಮಾರ್ ಅವರೇ ಈಗ ಹೇಳಿದ್ದಾರೆ. 2019ರಲ್ಲಿ ಕಾಂಗ್ರೆಸ್–ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿಯೇ ನನ್ನನ್ನು ಬಿಜೆಪಿಗೆ ಸೆಳೆಯುವ ಪ್ರಯತ್ನಗಳಾಗಿತ್ತು ಎಂದಿದ್ದಾರೆ.
ನಿನ್ನೆ ತಮ್ಮ ಕುರಿತ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್, ಬೆಂಗಳೂರಿನ ಮೂವರು ಕಾಂಗ್ರೆಸ್ ಶಾಸಕರು ಸೇರಿ ಹಲವು ಮಂದಿ ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟು ಬಿಜೆಪಿ ಕಡೆ ಮುಖ ಮಾಡಿದ್ದರು. ಅವತ್ತು ಕನಕಪುರದಲ್ಲಿದ್ದ ನಾನು ಓಡೋಡಿ ಬಂದು ನಮ್ಮ 5–6 ಶಾಸಕರನ್ನು ಕ್ವಾರ್ಟರ್ಸ್‌ಗೆ ಕರೆದುಕೊಂಡು ಬಂದಿದ್ದೆ. ಆಗ ದೆಹಲಿಯಿಂದ ನನಗೆ ಫೋನ್ ಬಂದಿತ್ತು. ಇನ್ ಕಮ್ ಟ್ಯಾಕ್ಸ್ ಆಡಿಟರ್ ರಿಂದ ಫೋನ್ ಮಾಡಿ ಮಾತನಾಡಿಸಿದ್ದರು. ಅಲ್ಲಿ ಒಬ್ಬ ಡಿಜಿ ಸಹ ಇದ್ದ. ಅವನು ಮಾತನಾಡಿದ. ಡಿಸಿಎಂ ಆಗುತ್ತೀರಾ ಅಥವಾ ಜೈಲಿಗೆ ಹೋಗುತ್ತೀರಾ ಎರಡರಲ್ಲಿ ಒಂದು ಆಯ್ಕೆ ಮಾಡಬೇಕು ಎಂದ. ಜೊತೆಗಿದ್ದ ಶಾಸಕರನ್ನು ವಾಪಸ್ ಕಳುಹಿಸಲು ಹೇಳಿದರು. ಆದರೆ ನಾನು ಪಕ್ಷನಿಷ್ಠೆಗಾಗಿ ಡಿಸಿಎಂ ಬೇಡ ಎಂದು ಜೈಲುವಾಸವನ್ನೇ ಆಯ್ಕೆ ಮಾಡ್ಕೊಂಡೆ ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC