ಬೆಂಗಳೂರು: ಟಾರ್ಗೆಟ್ ಮಾಡೋರ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ ಎಂದು ಯತ್ನಾಳ್ & ಟೀಂಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನನ್ನನ್ನು ಟಾರ್ಗೆಟ್ ಮಾಡುವವರು ಮಾಡಿಕೊಳ್ಳಲಿ, ಅವರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ನಾನು ಕೆಲಸ ಮಾಡಲು ಬಂದಿದ್ದೇನೆ, ಕೆಲಸ ಇಲ್ಲದವರು ಮಾತನಾಡುತ್ತಾರೆ, ಮಾತನಾಡಲಿ ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ವಿಜಯೇಂದ್ರ ಹೇಳಿದರು.
ಯತ್ನಾಳ್ ವಿರುದ್ಧ ಕ್ರಮದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರು ಕ್ರಮ ಕೈಗೊಳ್ಳಬೇಕೋ ಅವರು ತೆಗೆದುಕೊಳ್ಳುತ್ತಾರೆ. ಫೆಬ್ರವರಿ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ಇದೆ. ಪಕ್ಷದ ಇವತ್ತಿನ ಬೆಳವಣಿಗೆಗಳ ಬಗ್ಗೆ ಕಾರ್ಯಕರ್ತರ ನೋವು ಇದೆ. ಆ ನೋವು ಏನು ಎಂದು ಅರ್ಥ ಆಗುತ್ತೆ. ಇದೆಲ್ಲದಕ್ಕೂ ಇತಿಶ್ರೀ ಹಾಡೋ ಕೆಲಸ ಹೈಕಮಾಂಡ್ ಮಾಡುತ್ತದೆ ಎಂದು ಅವರು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx