ಕುದುರೆ ವ್ಯಾಪಾರದಿಂದ ತಪ್ಪಿಸ್ಕೊಳ್ಳಲು ಬೇರೆ ರಾಜ್ಯದ ಶಾಸಕರನ್ನು ರಾಜ್ಯಕ್ಕೆ ಕರೆತರುವ ಬಗ್ಗೆ ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಕೆಲ ರಾಜ್ಯಗಳಲ್ಲಿ ನೇರಹಣಾಹಣಿ ಇದ್ದು, ಆ ರಾಜ್ಯಗಳ ಶಾಸಕರನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆ ಡಿಕೆಶಿಗೆ ಪತ್ರಕರ್ತರಿಂದ ಎದುರಾಯಿತು.
ಇದಕ್ಕೆ ಉತ್ತರಿಸಿದ ಅವರು, “ಈ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ರಾಜಸ್ಥಾನ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಪಕ್ಷ ಹೇಳಿದ ಕೆಲಸ ಮಾಡಬೇಕಾಗುತ್ತದೆ. ನಮ್ಮ ಮುಂದೆ ಬೇರೆ ಆಯ್ಕೆಗಳಿಲ್ಲ” ಎಂದು ತಿಳಿಸಿದರು.
ಪಂಚರಾಜ್ಯಗಳ ವಿಧಾನಸಭೆ ಚುನಾವಣೆಗಳ ಎಕ್ಸಿಟ್ ಪೋಲ್ಗಳ ಮೇಲೆ ವೈಯಕ್ತಿಕವಾಗಿ ನನಗೆ ಮೇಲೆ ನಂಬಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಯಾವ ರೀತಿ ಎಕ್ಸಿಟ್ ಪೋಲ್ ಗಳು ಬಂದವು ಎಂಬುದು ನನಗೆ ಗೊತ್ತಿದೆ.
ಯಾರು ಕ್ಷೇತ್ರಗಳಲ್ಲಿ ಸುತ್ತಾಡಿರುತ್ತಾರೋ ಅವರಿಗೆ ಮಾತ್ರ ವಾಸ್ತವಾಂಶ ತಿಳಿದಿರುತ್ತದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ತೆಗೆದುಕೊಳ್ಳುವ ಮಾದರಿಗಳು ಅಲ್ಪಪ್ರಮಾಣದ್ದಾಗಿರುತ್ತದೆ. ಅದು ಇಡೀ ರಾಜ್ಯದ ಚಿತ್ರಣ ನಿರ್ಧರಿಸುವುದಿಲ್ಲ ಎಂದರು.


