ಮಂಡ್ಯ: ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಕಾನೂನಿನಲ್ಲಿ ನಷ್ಟ ಪರಿಹಾರ ನೀಡಲು ಅವಕಾಶವಿಲ್ಲ. ಆದರೂ, ಸಿಎಂ ಸಿದ್ದರಾಮಯ್ಯನವರನ್ನು ಒಪ್ಪಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ನಾಗಮಂಗಲದಲ್ಲಿ ಶನಿವಾರ ಶಾಂತಿಸಭೆ ನಡೆಸಲು ಬಂದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಷ್ಟ ಪ್ರಮಾಣದ ವರದಿ ಬಂದ ನಂತರ ಸರ್ಕಾರದಿಂದ ಪರಿಹಾರ ಕೊಡಿಸುವ ಜತೆಗೆ ವೈಯಕ್ತಿಕವಾಗಿಯೂ ಪರಿಹಾರ ನೀಡುತ್ತೇನೆ ಎಂದು ತಿಳಿಸಿದರು.
ಇನ್ನೂ ಕುಮಾರಸ್ವಾಮಿ ಪರಿಹಾರ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು ಪರಿಹಾರ ಕೊಟ್ಟಿದ್ದು ತಪ್ಪಲ್ಲ ಎಂದರು.
ಚನ್ನಪಟ್ಟಣದ ಉಪಚುನಾವಣೆಗಾಗಿ ಗಲಭೆ ಸೃಷ್ಟಿ ಎಂಬ ಎಚ್ ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಎರಡು ಬಾರಿ ಸಿಎಂ ಆಗಿದ್ದ ಕುಮಾರಸ್ವಾಮಿಗೆ ನಾನು ಉತ್ತರ ಕೊಡಬೇಕಾ? ನಾಗಮಂಗಲಕ್ಕೆ ಬಂದವರು ಜನರಿಗೆ ಏನು ಸಂದೇಶ ಕೊಟ್ಟಿದ್ದಾರೆ? ಸಿಎಂ ಇಳಿಸಲು ಕುತಂತ್ರ ಅನ್ನೋದು ಸರಿಯಲ್ಲ. ಎಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡದಿರುವುದೇ ಉತ್ತಮ’ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


