ಉಡುಪಿ: ಸಂವಿಧಾನ ಬದಲಿಸಬೇಕು ಎನ್ನುವ ಮಾತುಗಳನ್ನು ನಾನು ಆಡಿಯೇ ಇಲ್ಲ ಅಂತ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಈ ಸಂಬಂಧ ಮಾತನಾಡಿದ ಅವರು, ‘ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಂತ ಸಮಾವೇಶ ನಡೆದಿತ್ತು. ಅಲ್ಲಿ ನನ್ನ ಭಾಷಣದಲ್ಲಾಗಲಿ ಅಥವಾ ರಾಜ್ಯಪಾಲರಿಗೆ ಸಲ್ಲಿಸಲಾದ ಸಮಾವೇಶದ ನಿರ್ಣಯಗಳ ಲಿಖಿತ ಪ್ರತಿಯಲ್ಲಾಗಲಿ ಸಂವಿಧಾನ ಬದಲಾಯಿಸುವ ಕುರಿತ ಯಾವುದೇ ಉಲ್ಲೇಖ ಇಲ್ಲ. ಆದರೂ ಕೆಲವರು ದಂಗೆ ಎದ್ದ ರೀತಿ ವರ್ತಿಸುತ್ತಿದ್ದಾರೆ ಎಂದರು.
ನನ್ನ ವಿರುದ್ಧ ಪ್ರತಿಭಟಿಸುವ ಮತ್ತು ಖಂಡಿಸುವ ಕೆಲಸವಾಗುತ್ತಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಅವರ ಹೇಳಿಕೆಯಿಂದ ಇಷ್ಟೆಲ್ಲ ಆಗಿದೆ, ಅವರು ಪರಿಶೀಲಿಸಿ ಮಾತನಾಡಬೇಕಾಗಿತ್ತು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಇಲ್ಲಿ ಹಿಂದೂಗಳ ಭಾವನೆಗೂ ಬೆಲೆ ಕೊಡುವ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ನಾನು ಹೇಳಿದ್ದು ಹೌದು. ಸಂವಿಧಾನ ಬದಲಿಸಿ ಅಥವಾ ತಿದ್ದುಪಡಿ ಮಾಡಿ ಎಂದು ನಾನು ಯಾವತ್ತೂ ಹೇಳಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx