ಬೆಂಗಳೂರು: ನನ್ನ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಮಾಡುವಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ನಾನು ಯಾವುದೇ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ಫಿರ್ಯಾದಿ ಮಹಿಳೆಗೆ ದೂರು ನೀಡುವುದೇ ಹವ್ಯಾಸವಾಗಿತ್ತು. ಎಫ್‌ಐಆರ್ ದಾಖಲಾದ ನಂತರ ವಿಚಾರಣೆಗೆ ಹಾಜರಾಗಿದ್ದೆ.
ಏ.12ರಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದೆ. ನನ್ನ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ರದ್ದು ಮಾಡುವಂತೆ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇರೆಗೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಮಾಜಿ ಸಿಎಂ ಯಡಿಯೂರಪ್ಪ ನನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ ಬೆನ್ನಲ್ಲೇ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


