ಬೆಂಗಳೂರು: ಹಾಸನ ವಿಡಿಯೋ ಪೆನ್ ಡ್ರೈವ್ ಸೂತ್ರಧಾರಿ ಡಿ.ಕೆ. ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ.
ಇದರ ಬೆನ್ನಲ್ಲೇ ಇದೀಗ ಡಿ.ಕೆ. ಶಿವಕುಮಾರ್ ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ನನ್ನ ವಿರುದ್ಧ ಆರೋಪಿಸಿರುವ ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ. ಹೀಗಾಗಿ ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಲಾಗಿದೆ, ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರರಹಿತ. ನನಗೂ, ಪೆನ್ ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ನನ್ನ ವಿರುದ್ಧ ಆರೋಪಿಸಿರುವ ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ ಎಂದು ಸ್ಪಷ್ಟನೆ ನೀಡಿದ್ದಾರೆ.
ಕೋತಿ ತಿಂದು ಮೇಕೆ ಬಾಯಿಗೆ ಒರೆಸಿತು ಎಂಬಂತೆ ದೇವರಾಜೇಗೌಡ ಮಾಡೋದೆಲ್ಲ ಮಾಡಿ ಈಗ ನನ್ನ ವಿರುದ್ಧ ಆರೋಪ ಮಾಡಿದ್ದಾರೆ. ಇದರ ಹಿಂದೆ ಬಿಜೆಪಿ-ಜೆಡಿಎಸ್ ನಾಯಕರ ಷಡ್ಯಂತ್ರ ಇದೆ. ದೇವರಾಜೇಗೌಡ ಈ ಹಿಂದೆ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ದೇವರಾಜೇಗೌಡ ಬಿಜೆಪಿಯ ಸಕ್ರಿಯ ಕಾರ್ಯಕರ್ತ.
ಪ್ರಜ್ವಲ್ ಪ್ರಕರಣದಲ್ಲಿ ಜೆಡಿಎಸ್, ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ ಮತ್ತು ಮುಖಭಂಗ ಆಗಿದೆ. ಡ್ಯಾಮೇಜ್ ಕಂಟ್ರೋಲ್ ಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು. ದೇವರಾಜೇಗೌಡ ಮೂಲಕ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿಸಿದ್ದಾರೆ ಎಂದು ಹೇಳಿದ್ದಾರೆ. ಸದ್ಯ ನಾನು ಬೆಂಗಳೂರಿನಿಂದ ಹೊರಗಿದ್ದು, ಬಂದ ನಂತರ ಈ ಬಗ್ಗೆ ಮಾತಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296