nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.

    October 25, 2026

    ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!

    October 25, 2026

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026
    Facebook Twitter Instagram
    ಟ್ರೆಂಡಿಂಗ್
    • ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.
    • ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!
    • ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ
    • BHEL ನೇಮಕಾತಿ 2026: 660 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ ಅವಕಾಶ!
    • OTP ಬಳಕೆಯಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ! ಮೊಬೈಲ್ ಬಳಕೆದಾರರು ತಿಳಿಯಬೇಕಾದ ಮಾಹಿತಿ
    • ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!
    • ತುಮಕೂರಿನಲ್ಲಿ ಚಿರತೆ ಹಿಡಿಯಲು ಹೋದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದಲೇ ಅಡ್ಡಿ? 15 ಮಂದಿ ವಿರುದ್ಧ ಪೊಲೀಸ್ ಪ್ರಕರಣ!
    • ಮಧುಗಿರಿ | KSRTC ಬಸ್ ನಿರ್ವಾಹಕನಿಂದ ಪ್ರಯಾಣಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಡಿಪೋ ವ್ಯವಸ್ಥಾಪಕರಿಗೆ ದೂರು, ಸಾರ್ವಜನಿಕ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಬೆಳವಣಿಗೆಗೆ ನೀಲನಕ್ಷೆ ಸಿದ್ಧಪಡಿಸಲು ಸೂಚಿಸಿದ್ದೇನೆ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ September 18, 2023

    ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಬೆಳವಣಿಗೆಗೆ ನೀಲನಕ್ಷೆ ಸಿದ್ಧಪಡಿಸಲು ಸೂಚಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

    By adminSeptember 18, 2023No Comments3 Mins Read
    siddharamayya 3

    ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಬೆಳವಣಿಗೆಗೆ ನೀಲನಕ್ಷೆ ಸಿದ್ಧಪಡಿಸಲು ಸೂಚಿಸಲಾಗಿದ್ದು, ನಕ್ಷೆ ಸಿದ್ದಗೊಳ್ಳುತ್ತಿದೆ. ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತುಂಬುವಂತೆ ಸೂಚಿಸಲಾಗಿದೆ. ಶಿಕ್ಷಣಕ್ಕೆ ಒತ್ತು ನೀಡಬೇಕು. ಕೆ.ಕೆ ಆರ್.ಡಿ.ಬಿ ವ್ಯಾಪ್ತಿಯ ಯಾವ ಹುದ್ದೆಯೂ ಖಾಲಿ ಇರಬಾರದು. ಈಗಾಗಲೇ 2,618 ಶಿಕ್ಷಕರನ್ನು ನೇಮಕ ಮಾಡಲಾಗಿದ್ದು, ಇನ್ನೂ ಹುದ್ದೆಗಳು ಖಾಲಿ ಇದ್ದರೆ ನೇಮಕಾತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಕಲಬುರ್ಗಿಯಲ್ಲಿ ಮುಖ್ಯಮಂತ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್.ಡಿ.ಆರ್.ಎಫ್ / ಎಸ್.ಡಿ.ಆರ್.ಎಫ್ ಮಾನದಂಡಗಳನ್ನು ಬದಲಾಯಿಸಬೇಕೆಂದು ಕೇಂದ್ರ ಜಲಶಕ್ತಿ ಸಚಿವರಿಗೆ ಪತ್ರ ಬರೆದು ತಿಂಗಳಾಗಿದೆ. ಸರ್ವಪಕ್ಷ ನಿಯೋಗ ದೆಹಲಿಗೆ ತೆರಳಲು ಪತ್ರ ಬರೆದಿದ್ದು, ಈವರೆಗೆ ಒಂದು ತಿಂಗಳಾದರೂ ಪ್ರಧಾನ ಮಂತ್ರಿಗಳು ಸಮಯ ಕೊಟ್ಟಿಲ್ಲ. ಪುನಃ ಪತ್ರ ಬರೆಯುತ್ತಿದ್ದೇನೆ. ಜಂಟಿ ಸಮೀಕ್ಷೆ ಯ ನಂತರ ಎಷ್ಟು ಪರಿಹಾರ ನೀಡಬೇಕೆಂದು ತಿಳಿಯಲಿದೆ ಎಂದರು.

    ಬೆಳೆ ಪರಿಹಾರ ನೀಡುವ ಸಂಬಂಧ ಈಗಾಗಲೇ ಆದೇಶ ಹೊರಡಿಸಿದ್ದು ಜಾನುವಾರುಗಳಿಗೆ ಸದ್ಯಕ್ಕೆ ಮೇವಿನ ತೊಂದರೆ ಇಲ್ಲ. ಮುಂದೆ ತೊಂದರೆಯಾಗಬಹುದು ಎಂದು ತುರ್ತು ಯೋಜನೆ ತಯಾರು ಮಾಡಿದ್ದು, 20 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಜಂಟಿ ಸಮೀಕ್ಷೆ ಗಳನ್ನು ನಡೆಸಿದಾಗ 161 ತಾಲ್ಲೂಕುಗಳು ತೀವ್ರ ಬರಗಾಲಕ್ಕೆ ತುತ್ತಾಗಿವೆ. 34 ತಾಲ್ಲೂಕುಗಳಲ್ಲಿ ಸಾಧಾರಣ ಬರಗಾಲ. ಒಟ್ಟು 195 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಲಾಗಿದೆ. ಬೆಳೆ ಪರಿಹಾರ ವಿತರಣೆ, ಕುಡಿಯುವ ನೀರಿನ ವ್ಯವಸ್ಥೆ ಮಾಡುತ್ತೇವೆ, ಜನ ಗುಳೆ ಹೋಗುವುದನ್ನು ತಡೆಯುತ್ತೇವೆ ಎಂದು ಹೇಳಿದರು.

    ಕಲ್ಯಾಣ ಕರ್ನಾಟಕಕ್ಕೆ 5,000 ಕೋಟಿ ರೂ.ಗಳನ್ನು ಒದಗಿಸಿದ್ದೇವೆ. ಇಂಜಿನಿಯರಿಂಗ್ ವಿಭಾಗ ಆಗಬೇಕೆಂಬ ಬೇಡಿಕೆಯಿದ್ದು, ಇದನ್ನು ಪರಿಗಣಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದ ಮುಂಬಡ್ತಿ, ನೇಮಕಾತಿಗೆ ಸಂಬಂಧಿಸಿದಂತೆ 371 (ಜೆ) ಕೋಶ ಬೆಂಗಳೂರಿನಲ್ಲಿದೆ. ಕಲಬುರಗಿಯಲ್ಲಿ ಸ್ಥಾಪನೆಯಾಗಬೇಕೆಂದು ಹಿಂದಿನ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದರು ಆದರೆ ಪಾಲಿಸಲಿಲ್ಲ. ಆದರೆ ಅದನ್ನು ಜಾರಿ ಮಾಡಲು ನಾವು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.

    ಕಲ್ಯಾಣ ಕರ್ನಾಟಕದಲ್ಲಿ ಸಚಿವ ಸಂಪುಟ ಸಭೆಯನ್ನೂ ನಡೆಸುತ್ತೇವೆ. ಆದರೆ ಸಭೆ ನಡೆಸುವುದಕ್ಕಿಂತ ಇಲ್ಲಿನ ಸಮಸ್ಯೆಗಳಿಗೆ ಪರಿಹಾರ ದೊರಕುವುದು ನಮ್ಮ ಆದ್ಯರೆಯಾಗಿದೆ ಎಂದು ತಿಳಿಸಿದರು.

    ಅತಿಥಿ ಶಿಕ್ಷಕರಿಗೆ ಕಡಿಮೆ ಸಂಬಳ ಪಾವತಿಯಾಗುತ್ತಿರುವ ಬಗ್ಗೆ ಪರಿಶೀಲಿಸುತ್ತೇನೆ. ಗ್ಯಾರಂಟಿ ಯೋಜನೆಗಳ ಪ್ರಭಾವದಿಂದ ತೆಲಂಗಾಣ, ರಾಜಸ್ಥಾನ ರಾಜ್ಯಗಳಲ್ಲಿಯೂ ಗೃಹಲಕ್ಷ್ಮೀ ಯೋಜನೆಯಂಥ ಯೋಜನೆಗಳು ಘೋಷಣೆಯಾಗುತ್ತಿವೆ. ಜಾಗತಿಕ ಮೂಲ ಆದಾಯ ಎಂಬ ಪರಿಕಲ್ಪನೆಯನ್ನು ನಾವು ಅಳವಡಿಸಿಕೊಂಡು ಜನರಿಗೆ ದುಡ್ಡು ಕೊಡುತ್ತಿದ್ದೇವೆ. ಖರೀದಿಸುವ ಸಾಮರ್ಥ್ಯ ಹೆಚ್ಚಾದರೆ ಆರ್ಥಿಕ ಚಟುವಟಿಕೆಗಳು ಮತ್ತು ತಲಾದಾಯ ಹೆಚ್ಚಳವಾಗಿ, ಜಿಡಿಪಿ ಹೆಚ್ಚಾಗಲಿದೆ. ಇದರಿಂದ ರಾಜ್ಯ ಅಭಿವೃದ್ಧಿಯಾಗಲಿದೆ ಎಂದು ತಿಳಿಸಿದರು.

    ಕೆ.ಕೆ.ಆರ್.ಡಿ.ಬಿ ಯಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ತನಿಖೆ ಜಾರಿಯಲ್ಲಿದೆ, ಅಭಿವೃದ್ಧಿ ಆಯುಕ್ತರ ವರದಿ ಬರಬೇಕಿದೆ. ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕಲ್ಯಾಣ ಕರ್ನಾಟಕದಲ್ಲಿ ಖಾಲಿಯಿರುವ 26,000 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಶಿಕ್ಷಕರು, ವೈದ್ಯರು, ಸುಮಾರು 40 ಸಾವಿರ ಜನರಿದ್ದಾರೆ. ನಮ್ಮ ಅವಧಿಯಲ್ಲಿಯೇ 70 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಹೊಸದಾಗಿ 8 ವಿಶ್ವವಿದ್ಯಾಲಯ ಪ್ರಾರಂಭ ಮಾಡುವುದು ಜನಪರ ನಿರ್ಣಯವಲ್ಲ, ಮೊದಲು ಇರುವ ವಿವಿಗಳಿಗೆ ಸೂಕ್ತ ಮೂಲಸೌಕರ್ಯ ನೀಡಬೇಕು ಎಂದು ತಿಳಿಸಿದರು.

    ಕಾವೇರಿ ನೀರು ವಿಚಾರವಾಗಿ ಯಡಿಯೂರಪ್ಪನವರ ಹೇಳಿಕೆ ರಾಜಕೀಯ ಪ್ರೇರಿತ ಅಷ್ಟೆ. ನೀರು ಬಿಡಲು ನಮ್ಮ ಬಳಿ ನೀರಿಲ್ಲ, ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತಿದ್ದು, ನ್ಯಾಯಾಲಯ ಸಮಿತಿಯ ಆದೇಶ ಪಾಲನೆ ಮಾಡಿಲ್ಲ ಎಂದು ಪ್ರಶ್ನಿಸಿದೆ. ನೀರು ಬಿಡಬೇಕೆಂದಿದ್ದರೂ ನಮಗೆ 106 ಟಿ. ಎಂ. ಸಿ ನೀರಿನ ಅಗತ್ಯವಿದೆ. ನಮ್ಮ ಬಳಿ ಇರುವುದೇ 53 ಟಿಎಂಸಿ. ಕುಡಿಯುವ ನೀರಿಗೆ 30 ಟಿಎಂಸಿ, ಬೆಳೆ ಉಳಿಸಿಕೊಳ್ಳಲು 70 ಟಿಎಂಸಿ ನೀರು ಮತ್ತು ಕೈಗಾರಿಕೆಗಳಿಗೆ 3 ಟಿಎಂಸಿ ಅಗತ್ಯ. ಒಟ್ಟು 106 ಟಿಎಂಸಿ ನಮಗೆ ಅಗತ್ಯವಿದೆ. ನಮ್ಮ ಬಳಿ ಇರುವುದೇ 53 ಟಿಎಂಸಿ ನೀರು. \

    ನೀರು ಕೊಡಲು ನಮ್ಮ ಬಳಿ ನೀರಿಲ್ಲ. ಕಾವೇರಿ ನೀರನ್ನು ತಮಿಳುನಾಡಿಗೆ ಯಡಿಯೂರಪ್ಪ ಅವರ ಕಾಲದಲ್ಲಿ ಹಾಗೂ ಎಲ್ಲರ ಕಾಲದಲ್ಲಿ ಬಿಡಲಾಗಿದೆ. ಸಾಮಾನ್ಯ ವರ್ಷದಲ್ಲಿ 177.25 ಟಿಎಂಸಿ ನೀರು ಬಿಡಲಾಗುತ್ತದೆ. ಈವರೆಗೆ 37.7 ಟಿಎಂಸಿ ಮಾತ್ರ ಬಿಟ್ಟಿದ್ದೇವೆ. ನಾವು ಬಿಡಬೇಕಿದ್ದುದ್ದು 99 ಟಿಎಂಸಿ ನೀರು. ಎಲ್ಲಿ ಹೆಚ್ಚು ನೀರು ಬಿಟ್ಟಿದ್ದೇವೆ? ಕಾವೇರಿ ನೀರು ನಿಯಂತ್ರಣ ಸಮಿತಿ 5000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದು ಸೂಚಿಸಿದೆ. ಅಷ್ಟು ನೀರು ಇಲ್ಲದಿರುವುದರಿಂದ ನಾವು ನೀರು ಬಿಟ್ಟಿಲ್ಲ ಎಂದರು.

    ಇಂಡಿಯಾ ಒಕ್ಕೂಟ ಯಾವ ಧರ್ಮದ ವಿರುದ್ಧವೂ ಇಲ್ಲ. ಎಲ್ಲ ಧರ್ಮಗಳನ್ನು ಸಮಾನವಾಗಿ ಕಾಣುತ್ತೇವೆ. ಧರ್ಮ ಎಂದರೆ ಬದುಕಿನ ದಾರಿ. ಜನರಿಗಾಗಿ ಧರ್ಮವಿರುವುದು, ಧರ್ಮಕ್ಕಾಗಿ ಜನ ಅಲ್ಲ. ಧರ್ಮ ಮನುಷ್ಯನ ಒಳಿತಿಗಾಗಿ ಇದೆ. ದಯೆಯೇ ಧರ್ಮದ ಮೂಲ. ದಯೆ ಇಲ್ಲದ ಧರ್ಮ ಯಾವುದಯ್ಯಾ ಎಂದು ಬಸವಾದಿ ಶರಣರು ಹೇಳಿದ್ದಾರೆ. ಧರ್ಮದಲ್ಲಿ ದಯೆ, ಕರುಣೆ, ಮನುಷ್ಯತ್ವ ಇರಬೇಕು ಎಂದರು.

    ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸರ್ಕಾರ ಇನ್ನೂ ಗ್ಯಾರಂಟಿ ಯೋಜನೆಗಳ ಗುಂಗಿನಲ್ಲಿಯೇ ಇದೆ ಎಂದಿದ್ದಾರೆ, 5 ಗ್ಯಾರಂಟಿ ಯೋಜನೆ ಅಭಿವೃದ್ಧಿ ಕೆಲಸ ಅಲ್ಲವೇ? ಯಾವ ಸರ್ಕಾರ 1.13 ಕೋಟಿ ಜನರಿಗೆ 2000 ರೂ.ಗಳನ್ನು ನೀಡಿದೆ? ಯಡಿಯೂರಪ್ಪ ಅವರು 10 ಕೆ.ಜಿ ಯಲ್ಲಿ ಒಂದು ಕಾಳು ಕಡಿಮೆಯಾದರೂ ಪ್ರತಿಭಟಿಸುವುದಾಗಿ ಹೇಳಿದ್ದರು, ಮಾಡಿದರೇ ? ಅವರ ಕಾಲದಲ್ಲಿ 7 ಕೆಜಿ ನೀಡುತ್ತಿದ್ದ ಅಕ್ಕಿಯನ್ನು 5 ಕೆಜಿಗೆ ಇಳಿಸಿದರು. ಅಲ್ಲೇ ಗಿರಕಿ ಹೊಡೆಯುತ್ತಿದ್ದಾರೆ ಎಂದರು.

    ಐದು ಗ್ಯಾರಂಟಿ ಕೊಟ್ಟಿದ್ದೇವೆಂದು ಪಾದಯಾತ್ರೆ ಮಾಡುತ್ತಿದ್ದಾರೆಯೇ? 600 ಭಾರವಸೆ ನೀಡಿ ಶೇ 10 ರಷ್ಟನ್ನೂ ಜಾರಿಗೆ ತರಲಿಲ್ಲ. ಅವರಿಗೆ ಯಾವ ನೈತಿಕ ಹಕ್ಕಿದೆ? ಸಾಲಮನ್ನಾ ಮಾಡ್ತೀವಿ ಅಂದರು ಮಾಡಲಿಲ್ಲ. ನೀರಾವರಿಗೆ 1 ಲಕ್ಷ ಕೋಟಿ ನೀಡುವುದಾಗಿ ಹೇಳಿದರು, ನೀಡಲಿಲ್ಲ ಎಂದರು

    ಮೂವರು ಡಿಸಿಎಂ ಮಾಡುವ ಬಗ್ಗೆ ಅಂತಿಮವಾಗಿ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಈಗ ಒಬ್ಬರನ್ನು ಮಾಡಿದ್ದಾರೆ. ವರಿಷ್ಠರೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ, ಮಾತನಾಡಲಿ. ಹೈ ಕಮಾಂಡ್ ನಿರ್ಧಾರವನ್ನು ನಾವು ಪಾಲಿಸುತ್ತೇವೆ ಎಂದರು.

    ಕೃಷ್ಣ ಮೇಲ್ದಂಡೆ ಯೋಜನೆ ವಿಚಾರ ನ್ಯಾಯಾಲಯದಲ್ಲಿದ್ದು, ಆಂಧ್ರ, ತೆಲಂಗಾಣದವರು ಅರ್ಜಿ ಹಾಕಿದ್ದಾರೆ. ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆಯೇ ಹೊರಡಿಸಿಲ್ಲ. ಮಹದಾಯಿ ಯೋಜನೆಯಲ್ಲಿ ಗೆಜೆಟ್ ಅಧಿಸೂಚನೆ ಆಗಿದೆ. ಆದರೆ ಅರಣ್ಯ ಹಾಗೂ ಪರಿಸರ ತೀರುವಳಿ ನೀಡಿಲ್ಲ. ನಾಳೆ ಕೊಟ್ಟರೆ, ನಾಡಿದ್ದೇ ಕೆಲಸ ಶುರು ಮಾಡುತ್ತೇವೆ. ಅದಕ್ಕಾಗಿಯೇ ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ, ಯೋಜನೆಗಳ ಬಗ್ಗೆ ಸರ್ವಪಕ್ಷ ನಿಯೋಗ ತೆರಳಲು ದಿನಾಂಕ ನಿಗದಿಯಾಗುತ್ತಿಲ್ಲ. ಬಿಜೆಪಿಯವರೇ 25 ಸಂಸದರಿದ್ದಾರೆ, ಪ್ರಧಾನಿ ಭೇಟಿಗೆ ಅವಕಾಶ ಕೊಡಿಸಲಿ ಎಂದರು.

    admin
    • Website

    Related Posts

    ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ

    October 24, 2026

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026

    ನಂದಿಧ್ವಜ ಕಂಬ ಮುರಿತದಿಂದ ಮಾವುತನ ಪತ್ನಿ ಸಾವು ತನಕ! ಈ ಬಾರಿಯ ಮೈಸೂರು ದಸರಾದಲ್ಲಿ ನಡೆದಿದ್ದೇನು?

    October 24, 2026

    Comments are closed.

    Our Picks

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.

    October 25, 2026

    ತಿಪಟೂರು: ತಿಪಟೂರು ರೋಟರಿ ಕ್ಲಬ್ ಹಾಗೂ ಎನ್.ಆರ್.ಪಿ.ಯು. ಅಕಾಡೆಮಿ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪೋಲಿಯೋ ದಿನದ ಅಂಗವಾಗಿ “ಪೋಲಿಯೋ…

    ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!

    October 25, 2026

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026

    BHEL ನೇಮಕಾತಿ 2026: 660 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ ಅವಕಾಶ!

    October 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.