ಬೆಂಗಳೂರು: ಕಳೆದ ಒಂದೂವರೆ ತಿಂಗಳಿನಿಂದ ನಿರುದ್ಯೋಗಿಯಾಗಿ ಕುಳಿತಿದ್ದೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದರು. ವಿಧಾನಸಭೆ ಚುನಾವಣೆ ಸೋತ ಬಳಿಕ ಮಾಜಿ ಸಚಿವ ವಿ ಸೋಮಣ್ಣ ಅವರು ಇದೇ ಮೊದಲ ಬಾರಿಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿ ಮಾಧ್ಯಮಗಳ ಜೊತೆ ಮಾತನಾಡಿದರು.
ಚುನಾವಣೆ ಸೋಲಿನ ಬಳಿಕ ಮೊದಲ ಬಾರಿ ಕಚೇರಿಗೆ ಬಂದಿದ್ದೇನೆ. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬುದನ್ನು ನಂಬಿದವನು ನಾನು. ಗೋವಿಂದರಾಜ ನಗರದಲ್ಲಿ 480 ಕೋಟಿ ರೂ.ಗೂ ಹೆಚ್ಚಿನ ಕೆಲಸ ಮಾಡಿರುವೆ. ಆಸ್ಪತ್ರೆ, ಶಾಲೆ, ಕಾಲೇಜು ಸೇರಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನಾನು ಮನೆಯಲ್ಲಿ ಆರಾಮಾಗಿ ಮಲಗಿದ್ದರೂ ಗೆಲ್ಲುತ್ತಿದ್ದೆ. ಆದರೆ ಪಕ್ಷ ನೀಡಿದ ಟಾಸ್ಕ್ ಪೂರೈಸಲು ಕ್ಷೇತ್ರ ಬಿಟ್ಟು ಹೋದೆ. ವರುಣಾ ಹಾಗೂ ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದೆ. ಎರಡರಲ್ಲೂ ಸೋತು ಈಗ ನಿರುದ್ಯೋಗಿ ಆಗಿ ಮನೆಯಲ್ಲಿ ಕುಳಿತಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದರು.
ನಾನೇನು ರಾಜಕೀಯ ಸನ್ಯಾಸಿ ಅಲ್ಲ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷರಾಗುವ ಕನಸಿನ ಬಗ್ಗೆ ಮಾಜಿ ಸಚಿವ ವಿ. ಸೋಮಣ್ಣ ಪುನರುಚ್ಛರಿಸಿದ್ದಾರೆ. ಇಂದು ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡಿದ ಸೋಮಣ್ಣ, ನಾನೇನು ರಾಜಕೀಯ ಸನ್ಯಾಸಿ ಅಲ್ಲ. ರಾಜಕಾರಣದಲ್ಲಿ ನನಗೆ ಸಾಕಷ್ಟು ಅನುಭವವಿದೆ. ಇಲ್ಲಿ ಒಂದು ಮಂದು ಸುಖಾಸುಮ್ಮನೆ ನಾನು unemployed ಆಗಿರಲಾರೆ ಎಂದು ಹೇಳುತ್ತಾ, ರಾಜ್ಯಾಧ್ಯಕ್ಷರ ಹುದ್ದೆ ನಿಭಾಯಿತ್ತೇವೆ ಎಂದಿದ್ದಾರೆ.
ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಎರಡೆರಡು ಕ್ಷೇತ್ರಗಳಿಂದ ಕಣಕ್ಕಿಳಿದು ಹಿನ್ನಡೆ ಅನುಭವಿಸಿರುವ ಮಾಜಿ ಸಚಿವ ವಿ. ಸೋಮಣ್ಣ, ತಮ್ಮ ರಾಜಕೀಯ ಜೀವನವನ್ನು ಕ್ರಿಕೆಟ್ ಗೆ ಹೋಲಿಕೆ ಮಾಡಿ ಮಾತನ್ನಾಡಿದ್ದಾರೆ. ಇಂದು ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ನಾನು ಒಳ್ಳೆಯ ಆಟಗಾರ. ಫೋರ್ ಮತ್ತೆ ಸಿಕ್ಸ್ ಹೊಡೆಯಲು ಹೋಗಿ ಕ್ಲೀನ್ ಬೋಲ್ಡ್ ಆಗಿದ್ದೇನೆ ಅಷ್ಟೇ ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


