ಬೆಂಗಳೂರು: ಗುತ್ತಿಗೆದಾರ ಸಚಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ತಮ್ಮ ವಿರುದ್ಧದ ವಿಪಕ್ಷಗಳ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.
ನಾನು ಅವರ ಸಿದ್ಧಾಂತಕ್ಕೆ ವಿರುದ್ಧವಾಗಿರುವುದರಿಂದ ಬಿಜೆಪಿ ತನ್ನನ್ನು ಗುರಿಯಾಗಿಸಿದೆ ಎಂದು ಪ್ರಿಯಾಂಕ್ ಖರ್ಗೆ ನೇರವಾಗಿ ಆರೋಪ ಮಾಡಿದ್ದಾರೆ.
ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರು, ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಸಂಬಂಧವಿದೆ ಎಂಬುದನ್ನು ಸಾಬೀತುಪಡಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದರು.
ಬಿಜೆಪಿಯು ಎಲ್ಲವನ್ನೂ ಮಾಡಬಹುದು. ಆದರೆ, ಈ ಆತ್ಮಹತ್ಯೆಯು ಸರ್ಕಾರಕ್ಕೂ ಮತ್ತು ನನಗೂ ಹೇಗೆ ಸಂಬಂಧಿಸಿದೆ ಎಂಬುದನ್ನು ಕರ್ನಾಟಕದ ಜನರ ಮುಂದಿಡುವಲ್ಲಿ ಅವರಿಗೆ ಇನ್ನೂ ಸಾಧ್ಯವಾಗುತ್ತಿಲ್ಲ. ಈ ವಿಚಾರದ ಮೂಲಕ ಅವರು ತಮ್ಮ ನಾಯಕತ್ವವನ್ನು ಸ್ಥಾಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಬಿಜೆಪಿ ಈಗ ಒಂದು ಬಣ–ಪ್ರೇರಿತ ಪಕ್ಷವಾಗಿದೆ. ಕರ್ನಾಟಕದಲ್ಲಿ ನಾಯಕತ್ವದ ಕಿತ್ತಾಟ ನಡೆಯುತ್ತಲೇ ಇದೆ. ಅವರು ಎಂದಿನಂತೆ ಈ ಸಾವನ್ನು ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx