nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸನದ ಹೇಮಾವತಿ ನಗರದಲ್ಲಿ ಅದ್ದೂರಿಯಾಗಿ ಜರುಗಿದ ಗಣಪತಿ ವಿಸರ್ಜನೆ: ಜಾನಪದ ಕಲಾ ವೈಭವದೊಂದಿಗೆ ಕಳೆಕಟ್ಟಿದ ಮೆರವಣಿಗೆ

    October 1, 2026

    ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗುವೆ: ಕೆ.ಎಂ.ಸುರೇಶ್

    October 1, 2026

    ವಿವಿಧ ಅಭಿವೃದ್ಧಿ ಯೋಜನೆಗಳ ಭೂಸ್ವಾಧೀನ ಪ್ರಗತಿ ಪರಿಶೀಲನಾ ಸಭೆ

    October 1, 2026
    Facebook Twitter Instagram
    ಟ್ರೆಂಡಿಂಗ್
    • ಹಾಸನದ ಹೇಮಾವತಿ ನಗರದಲ್ಲಿ ಅದ್ದೂರಿಯಾಗಿ ಜರುಗಿದ ಗಣಪತಿ ವಿಸರ್ಜನೆ: ಜಾನಪದ ಕಲಾ ವೈಭವದೊಂದಿಗೆ ಕಳೆಕಟ್ಟಿದ ಮೆರವಣಿಗೆ
    • ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗುವೆ: ಕೆ.ಎಂ.ಸುರೇಶ್
    • ವಿವಿಧ ಅಭಿವೃದ್ಧಿ ಯೋಜನೆಗಳ ಭೂಸ್ವಾಧೀನ ಪ್ರಗತಿ ಪರಿಶೀಲನಾ ಸಭೆ
    • ಬರಪೀಡಿತ ಪ್ರದೇಶದಲ್ಲಿ ‘ಮರ’ಣಹೋಮ:  ಪ್ರಕರಣದಿಂದ ವ್ಯಾಪಾರಿ ಔಟ್: ಅರಣ್ಯ ಇಲಾಖೆ ನಡೆಗೆ ತೀವ್ರ ಸಂಶಯ
    • ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ: 9 ಮಂದಿಗೆ ಗಾಯ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕ
    • ಬೆಂಗಳೂರಿಗರ ನಿದ್ದೆಗೆಡಿಸಿದ್ದ, ವೃದ್ಧನನ್ನು ಕೊಂದ ಕಾಡಾನೆ ಕೊನೆಗೂ ಬನ್ನೇರುಘಟ್ಟ ಅರಣ್ಯಕ್ಕೆ ವಾಪಸ್!
    • ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸಚಿವ ಬೈರತಿ ಸುರೇಶ್  ಹೇಳಿದ್ದೇನು?
    • 2028ಕ್ಕೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗುವೆ: ಕೆ.ಎಂ.ಸುರೇಶ್
    ಕೊರಟಗೆರೆ October 1, 2026

    ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗುವೆ: ಕೆ.ಎಂ.ಸುರೇಶ್

    By Ganesh TumkuruOctober 1, 2026No Comments2 Mins Read
    bjp

    ಕೊರಟಗೆರೆ: ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಎನ್‌ ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರು ಬುಧವಾರ ತಾಲ್ಲೂಕಿನಲ್ಲಿ ಚುನಾವಣಾ ಪ್ರಚಾರ ನಡೆಸಿ ಪದವೀಧರ ಮತದಾರರಲ್ಲಿ ಮತಯಾಚಿಸಿದರು.

    ಪಟ್ಟಣದ ಕಾಳಿದಾಸ ಸ್ಕೂಲ್, ಸರ್ಕಾರಿ ಜೂನಿಯರ್ ಕಾಲೇಜು, ಸರ್ಕಾರಿ ಪ್ರೌಢಶಾಲೆ, ರಾಘವೇಂದ್ರ ಶಾಲೆ, ಬಾಲಕಿಯರ ಪ್ರೌಢಶಾಲೆ, ಚಾಣಕ್ಯ ಸ್ಕೂಲ್, ಜೆಕೆ ಮೆಮೋರಿಯಲ್ ಸ್ಕೂಲ್, ನ್ಯಾಯಾಲಯ ಸಂಕೀರ್ಣ, ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರಿಯದರ್ಶಿನಿ ಕಾಲೇಜು ಹಾಗೂ ರವೀಂದ್ರ ಭಾರತಿ ಸ್ಕೂಲ್‌ಗಳಿಗೆ ಭೇಟಿ ನೀಡಿದ ಅವರು, ಪ್ರಾಂಶುಪಾಲರು, ಉಪನ್ಯಾಸಕರು, ಸರ್ಕಾರಿ ನೌಕರರು ಹಾಗೂ ನೋಂದಾಯಿತ ಪದವೀಧರ ಮತದಾರರನ್ನು ಭೇಟಿಯಾಗಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಪದವೀಧರರ ಬ್ಸಮಸ್ಯೆಗಳು ಹಾಗೂ ಶಿಕ್ಷಣ ಕ್ಷೇತ್ರದ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಿದರು.

    ನಂತರ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಂ. ಸುರೇಶ್, ‘ಪದವೀಧರ ಕ್ಷೇತ್ರದ ಚುನಾವಣೆ ಕೇವಲ ಚುನಾವಣೆಯಲ್ಲ. ಇದು ವಿದ್ಯಾವಂತರ ಧ್ವನಿಯಾಗುವ ಅವಕಾಶ. ಪದವೀಧರ ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿ, ಗುತ್ತಿಗೆ ಹಾಗೂ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ, ಖಾಸಗಿ ಶಾಲಾ–ಕಾಲೇಜುಗಳ ಶಿಕ್ಷಕರ ಸಮಸ್ಯೆಗಳ ಪರಿಹಾರ ಹಾಗೂ ಸರ್ಕಾರಿ ಸೌಲಭ್ಯಗಳಲ್ಲಿ ಪದವೀಧರರಿಗೆ ಆದ್ಯತೆ ನೀಡುವ ಕುರಿತು ವಿಧಾನ ಪರಿಷತ್‌ ನಲ್ಲಿ ಪ್ರಬಲವಾಗಿ ಧ್ವನಿ ಎತ್ತುತ್ತೇನೆ’ ಎಂದರು.

    ‘ಎನ್‌ ಡಿಎ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸಲು ಅವಕಾಶ ನೀಡುವಂತೆ ತಮ್ಮ ಅಮೂಲ್ಯ ಮತವನ್ನು ನೀಡಿ ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.

    ಬಿಜೆಪಿ ತಾಲ್ಲೂಕು ಮಂಡಲ ಅಧ್ಯಕ್ಷ ರುದ್ರೇಶ್ ಮಾತನಾಡಿ, ‘ಕೆ.ಎಂ. ಸುರೇಶ್ ಅವರು ವಿದ್ಯಾವಂತ ಹಾಗೂ ಸಂಘಟನಾ ಚತುರರಾಗಿದ್ದು, ಪದವೀಧರರ ಸಮಸ್ಯೆಗಳನ್ನು ಅರಿತುಕೊಂಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ಪದವೀಧರರ ಧ್ವನಿಯಾಗಿ ಕೆಲಸ ಮಾಡಲು ಅವರಿಗೆ ಅವಕಾಶ ನೀಡಬೇಕು’ ಎಂದರು.

    ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಕಾಮರಾಜು ಮಾತನಾಡಿ, ‘ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರನ್ನು ಬೆಂಬಲಿಸುವ ಮೂಲಕ ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುವಂತಹ ನಾಯಕತ್ವಕ್ಕೆ ಅವಕಾಶ ಕಲ್ಪಿಸಬೇಕು. ಪದವೀಧರ ಮತದಾರರು ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಬೇಕು’ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರುಗಳಾದ ಪವನ್ ಕುಮಾರ್, ನಟರಾಜು, ಮಾಜಿ ನೌಕರರ ಸಂಘದ ಅಧ್ಯಕ್ಷ ವೀರಖ್ಯಾತಯ್ಯ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಚಿಕ್ಕರಂಗಯ್ಯ, ಹಿಮಾನಂದ, ಪ್ರದೀಪ್, ಶ್ರೀಧರ್, ಅರುಣ್, ಮಮತಾ, ವಸಂತಕುಮಾರ್  ಸೇರಿದಂತೆ ಎನ್ ಡಿ ಎ ಪಕ್ಷದ ಮುಖಂಡರುಗಳು-ಪದಾಧಿಕಾರಿಗಳು  ಹಾಗೂ ಪದವೀಧರ ಮತದಾರರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಬರಪೀಡಿತ ಪ್ರದೇಶದಲ್ಲಿ ‘ಮರ’ಣಹೋಮ:  ಪ್ರಕರಣದಿಂದ ವ್ಯಾಪಾರಿ ಔಟ್: ಅರಣ್ಯ ಇಲಾಖೆ ನಡೆಗೆ ತೀವ್ರ ಸಂಶಯ

    October 1, 2026

    ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ

    September 29, 2026

    ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.

    September 29, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಾಸನದ ಹೇಮಾವತಿ ನಗರದಲ್ಲಿ ಅದ್ದೂರಿಯಾಗಿ ಜರುಗಿದ ಗಣಪತಿ ವಿಸರ್ಜನೆ: ಜಾನಪದ ಕಲಾ ವೈಭವದೊಂದಿಗೆ ಕಳೆಕಟ್ಟಿದ ಮೆರವಣಿಗೆ

    October 1, 2026

    ಹಾಸನ ನಗರದ ಹೇಮಾವತಿ ನಗರದ ರಾಯಲ್ ಅಪೋಲೊ ಸ್ಕೂಲ್ ಹಿಂಭಾಗದಲ್ಲಿ ವಿಕಟ ಸೇವಾ ಟ್ರಸ್ಟ್ ಮತ್ತು ವಾಲಿಬಾಲ್ ಗೆಳೆಯರ ಬಳಗದ…

    ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗುವೆ: ಕೆ.ಎಂ.ಸುರೇಶ್

    October 1, 2026

    ವಿವಿಧ ಅಭಿವೃದ್ಧಿ ಯೋಜನೆಗಳ ಭೂಸ್ವಾಧೀನ ಪ್ರಗತಿ ಪರಿಶೀಲನಾ ಸಭೆ

    October 1, 2026

    ಬರಪೀಡಿತ ಪ್ರದೇಶದಲ್ಲಿ ‘ಮರ’ಣಹೋಮ:  ಪ್ರಕರಣದಿಂದ ವ್ಯಾಪಾರಿ ಔಟ್: ಅರಣ್ಯ ಇಲಾಖೆ ನಡೆಗೆ ತೀವ್ರ ಸಂಶಯ

    October 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.