ಸಂಸದ, ಕೇಂದ್ರ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಅವರು ನಾನು ಚುನಾವಣಾ ರಾಜಕೀಯದಿಂದ ದೂರ ಉಳಿದಿದ್ದು, ರಾಜಕರಾಣದಿಂದ ದೂರ ಉಳಿದಿಲ್ಲ ಎಂಬ ಮಾತನ್ನು ಹೇಳಿದ್ದಾರೆ. ರಾಜಕೀಯ ಶುದ್ಧೀಕರಣದ ಕೆಲಸ ನಾ ಮಾಡುವೆ. ನನ್ನೊಂದಿಗೆ ಕೈ ಜೋಡಿಸುವ ಸಮಾನ ಮನಸ್ಕರಿಗೆ ಸ್ವಾಗತವಿದೆ ಎಂದು ಅವರು ಭಾನುವಾರ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಸುದ್ದಿಗಾರರೊಂದಿಗೆ ಹೇಳಿದರು.
ಗುಂಪುಗಾರಿಕೆಯ ಕಾರಣದಿಂದ ಬಿಜೆಪಿ ಕಳೆದ ಬಾರಿ ಅಧಿಕಾರ ಕಳೆದುಕೊಂಡಿತ್ತು. ನಾನು ಗುಂಪುಗಾರಿಕೆ ರಾಜಕಾರಣ ಮಾಡುವುದಿಲ್ಲ. ನನ್ನದು ಬಿಜೆಪಿ ಗುಂಪು ಮಾತ್ರ ಎಂದು ಹೇಳಿದರು. ಮೋದಿ ಅವರು ಕಳೆದ ಹತ್ತು ವರ್ಷದಿಂದ ಸ್ವಾರ್ಥರಹಿತ ರಾಜಕಾರಣ ಮಾಡಿದ್ದಾರೆ. ಮುಕ್ತ, ಭ್ರಷ್ಟಾಚಾರ ಮುಕ್ತ, ಜಾತಿವಾದ ಮುಕ್ತ, ರಾಜನೀತಿಯ ಪರಿಕಲ್ಪನೆ ಇದು ಮೋದಿ ವಾಕ್ಯ. ಇದು ಸಾಕಾರಗೊಳ್ಳಲೇ ಬೇಕು. ಈ ಬಾರಿಯ ಚುನಾವಣೆಯಲ್ಲಿ ಅದು ಆಗಬೇಕು.
ನನ್ನ ಪ್ರಾಮಾಣಿಕತನ, ಸಚ್ಚಾರಿತ್ರ್ಯಕ್ಕೆ ನನಗೆ ಯಾರದ್ದೂ ಸರ್ಟಿಫಿಕೇಟ್ ಬೇಕಿಲ್ಲ. ಕರ್ನಾಟಕದಲ್ಲಿ ಪ್ರಾಮಾಣಿಕತೆ, ಸಚ್ಚಾರಿತ್ರ್ಯ ಅರ್ಥ ಕಳೆದುಕೊಳ್ಳುವ ರಾಜನೀತಿ ಇದೆ. ಇದು ನೋವಿನ ಸಂಗತಿ. ಚುನಾವಣೆಯವರೆಗೆ ಈ ನೋವನ್ನು ನುಂಗುತ್ತೇನೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296