ಬೆಂಗಳೂರು: ಎಲ್ಲರನ್ನೂ ಭೇಟಿ ಮಾಡಿ ಆಶೀರ್ವಾದ ಪಡೆಯುತ್ತೇನೆ. ಪದಗ್ರಹಣ ಕಾರ್ಯಕ್ರಮಕ್ಕೆ ವಿಶೇಷ ಸಿದ್ಧತೆ ಏನೂ ಆಗಿಲ್ಲ.
ಜಿಲ್ಲೆಗಳಿಂದ ಕಾರ್ಯಕರ್ತರು ಬರುತ್ತಾರೆ. ನಳೀನ್ ಕುಮಾರ್ ಕಟೀಲು ಅವರು ನನಗೆ ಆಶೀರ್ವಾದ ಮಾಡಿ ಜವಾಬ್ದಾರಿ ಹಸ್ತಾಂತರ ಮಾಡುತ್ತಾರೆ.
ಎಲ್ಲಾ ಶಾಸಕರಿಗೆ ಖುದ್ದು ಕರೆ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತೇನೆ. ಮಾಜಿ ಶಾಸಕರು, ಜಿಲ್ಲಾಧ್ಯಕ್ಷರಿಗೂ ಕಾರ್ಯಕ್ರಮಕ್ಕೆ ಆಹ್ವಾನಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.


