nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ

    July 13, 2026

    ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ

    July 13, 2026

    ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ

    July 13, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
    • ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
    • ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ
    • ವಿದ್ಯುತ್ ಶಾಕ್‌ ನಿಂದ ವಿದ್ಯಾರ್ಥಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
    • ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!
    • 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ
    • ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ
    • ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ನಾಮಕರಣಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ October 5, 2025

    ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ನಾಮಕರಣಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ

    By adminOctober 5, 2025No Comments2 Mins Read
    siddaramaiah

    ಬೆಂಗಳೂರು: ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ “ಬಸವ ಮೆಟ್ರೋ” ಎಂದು ಘೋಷಿಸಿ ಬಿಡುತ್ತಿದ್ದೆ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ವಿಶ್ವಗುರು ಬಸವಣ್ಣ ಅವರನ್ನು “ಕರ್ನಾಟಕ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ–2025’ ರ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

    ನಮ್ಮಲ್ಲಿ ಅನೇಕ ಜಾತಿ, ಅನೇಕ‌ ಧರ್ಮಗಳಿವೆ. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು ನಾವು. ಶೂದ್ರರು ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು.  ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ‌ ನಂಬಿಕೆ – ಬದ್ಧತೆ ಇಟ್ಟುಕೊಂಡಿದ್ದೇನೆ.  ಅಂದಿಗಲ್ಲ—ಇಂದಿಗಲ್ಲ–ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ ಎಂದು ಹೇಳಿದರು.

    ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ, ಹತ್ತು ಹಲವು ಭಾಗ್ಯಗಳ, ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ.  ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಇಡೀ ಸರ್ಕಾರ ಬಸವಣ್ಣನವರಿಗೆ ಗೌರವ ಸೂಚಿಸಿದೆ ಎಂದರು.

    ನಾನು ಕಾನೂನು ವಿದ್ಯಾರ್ಥಿ ಆದ ಗಳಿಗೆಯಿಂದ ಬಸವಣ್ಣನವರ ಅನುಯಾಯಿ. ಅಂಬೇಡ್ಕರ್ ಅವರೂ ತಮ್ಮ ಸಂವಿಧಾನದಲ್ಲಿ ಬಸವಣ್ಣನವರ ಆಶಯಗಳನ್ನೇ ಹೇಳಿದ್ದಾರೆ. ಹೀಗಾಗಿ ಸಂವಿಧಾನ ಮತ್ತು ಶರಣ ಸಂಸ್ಕೃತಿ ಒಂದೇ ಆಗಿದೆ. ನಮ್ಮ ಸರ್ಕಾರ ಸಂವಿಧಾನದ ಪೀಠಿಕೆ ಓದಿಸುವುದನ್ನು ಅಭಿಯಾನದ ರೀತಿ ನಡೆಸುತ್ತಿದೆ.  ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯವಾದರೆ ಬಸವಣ್ಣನವರೂ ಜಾತಿ ರಹಿತ, ವರ್ಗ ರಹಿತ ಬ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದರು. ಹೀಗಾಗಿ ಬಸವಣ್ಣನವರು ಯಾವತ್ತಿಗೂ ಪ್ರಸ್ತುತ ಎಂದು ಸಿದ್ದರಾಮಯ್ಯ ಹೇಳಿದರು.

    ಬಸವಣ್ಣನವರು ನುಡಿದಂತೆ ನಡೆದರು. ನಾವು ಬಸವ ಅನುಯಾಯಿಗಳೂ ನುಡಿದಂತೆ ನಡೆದಾಗ ಮಾತ್ರ ನಿಜವಾದ ಬಸವ ಅನುಯಾಯಿ ಆಗುತ್ತೇವೆ.  ವಚನ ವಿಶ್ವವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ

    July 12, 2026

    ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ

    July 12, 2026

    ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ

    July 12, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ

    July 13, 2026

    ತುಮಕೂರು: ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷ ಎಲ್ಲೆಯೂ ಮತದಾರರ ಪಟ್ಟಿಗೆ ಅಕ್ರಮವಾಗಿ ಮತದಾರರನ್ನು ಸೇರಿಸುವ ಕೆಲಸ ಮಾಡಿಲ್ಲ, ಇದು ಬಿಜೆಪಿಯ…

    ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ

    July 13, 2026

    ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ

    July 13, 2026

    ವಿದ್ಯುತ್ ಶಾಕ್‌ ನಿಂದ ವಿದ್ಯಾರ್ಥಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

    July 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.