ವಿಜಯಪುರ: ನಟಿ ರನ್ಯಾ ರಾವ್ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿರುವ ಇಬ್ಬರು ಸಚಿವರ ಹೆಸರು ಶೀಘ್ರವೇ ವಿಧಾನಸಭೆಯಲ್ಲಿ ಬಹಿರಂಗ ಪಡಿಸುವುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.
ರನ್ಯಾ ಜೊತೆ ಯಾರೆಲ್ಲಾ ಸಂಬಂಧ ಹೊಂದಿದ್ದಾರೆ, ಅವರಿಗೆ ಯಾವ ರೀತಿಯ ಭದ್ರತೆ ಒದಗಿಸಲಾಗಿದೆ ಎಂಬುದನ್ನು ವಿಧಾನಸಭೆಯಲ್ಲಿ ಬಹಿರಂಗಪಡಿಸುತ್ತೇನೆ. ಅವರು ಚಿನ್ನವನ್ನು ಎಲ್ಲಿಂದ ಪಡೆದರು ಎಂಬುದು ಸೇರಿದಂತೆ ಎಲ್ಲಾ ಮಾಹಿತಿಯನ್ನು ನಾವು ಸಂಗ್ರಹಿಸಿದ್ದೇವೆ ಎಂದರು.
ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಸಚಿವರ ಹೆಸರುಗಳನ್ನು ಬಹಿರಂಗಪಡಿಸುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ಒತ್ತಾಯಿಸುತ್ತಿದೆ. ಈ ನಡುವೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ಹೇಳಿಕೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4