ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾದರೂ ನಾನು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುವುದರಲ್ಲಿ ಅನುಮಾನವೇ ಇಲ್ಲ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.
ರಾಷ್ಟ್ರಭಕ್ತರ ಬಳಗದ ಕಾರ್ಯಕರ್ತರೊಂದಿಗೆ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಈಶ್ವರಪ್ಪ ನರೇಂದ್ರ ಮೋದಿ ಪ್ರಧಾನಿಯಾಗಬೇಕು, ಭಾರತೀಯ ಜನತಾ ಪಕ್ಷ ಶುದ್ದೀಕರಣವಾಗಬೇಕು ಎನ್ನುವ ಸಂಕಲ್ಪ ಇರಿಸಿಕೊಂಡು ಹೋರಾಟ ಮಾಡುತ್ತಿರುವ ನನಗೆ ಪ್ರತಿ ಬೂತ್‌ನಿಂದ ಹೆಚ್ಚಿನ ಬೆಂಬಲ ದೊರೆಯುತ್ತಿದೆ. ಎಲ್ಲಾ ಬೂತ್‌ನಲ್ಲೂ ಹೆಚ್ಚಿನ ಮತ ಪಡೆಯುವ ವಿಶ್ವಾಸವಿದೆ ಎಂದು ಹೇಳಿದರು.
ರಾಷ್ಟ್ರಭಕ್ತರ ಬಳಗದ ಕಾರ್ಯಕರ್ತರು ನಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ನನ್ನ ಗುರುತಾದ ರೈತನ ಚಿಹ್ನೆಗೆ ಮತ ಹಾಕುವುದರ ಮೂಲಕ ನನ್ನನ್ನು ಗೆಲ್ಲಿಸಬೇಕು. ನಿಮ್ಮೆಲ್ಲರ ಮತ ಪರಿವರ್ತನೆ ಕೆಲಸದಿಂದ ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


