ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಆಯೋಜಿಸಲಾದ ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ICDS) ಯ ಸುವರ್ಣ ಮಹೋತ್ಸವವನ್ನು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಭವ್ಯವಾಗಿ ಉದ್ಘಾಟಿಸಲಾಯಿತು.
ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಇಲಾಖೆಯ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ, ಅಕ್ಕಾಪಡೆ ಹಾಗೂ 5000 ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ–-ಯುಕೆಜಿ ತರಗತಿಗಳ ಆರಂಭಕ್ಕೆ ಅಧಿಕೃತ ಚಾಲನೆ ನೀಡಲಾಯಿತು.





ಕಾರ್ಯಕ್ರಮದಲ್ಲಿ ಮಾಜಿ ರಾಜ್ಯಪಾಲರಾದ ಮಾರ್ಗರೇಟ್ ಆಳ್ವಾ, ಸಚಿವರಾದ ಎಚ್.ಸಿ. ಮಹದೇವಪ್ಪ, ಈಶ್ವರ್ ಖಂಡ್ರೆ, ಕೆ.ಎಚ್. ಮುನಿಯಪ್ಪ, ಮಾಜಿ ಸಚಿವರಾದ ಮೋಟಮ್ಮ, ರಾಣಿ ಸತೀಶ್, ಜಯಮಾಲ ರಾಮಚಂದ್ರ, ಶಾಸಕರಾದ ರೂಪಕಲಾ ಶಶಿಧರ್, ಉದಯ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಬಲ್ಕಿಷ್ ಬಾನು, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ. ರೇವಣ್ಣ, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪದ್ಮಾವತಿ, ಬಾಲಭವನದ ಅಧ್ಯಕ್ಷರಾದ ಬಿ.ಆರ್. ನಾಯ್ಡು, ಮಕ್ಕಳ ಆಯೋಗದ ಅಧ್ಯಕ್ಷರಾದ ಶಶಿಧರ್ ಕೋಸುಂಬೆ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ್ವರ ಬಬಲೇಶ್ವರ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


