ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್‌ಐ) ನಡೆಸಿದ ಉತ್ಖನನದ ವೇಳೆ ‘ಶೇಷಶಾಯಿ ವಿಷ್ಣು’ ವಿಗ್ರಹ ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯ ಸಿಂಧಖೇಡ್ ರಾಜಾ ಪಟ್ಟಣದಲ್ಲಿ ಪತ್ತೆಯಾಗಿದೆ.
ಲಖುಜಿ ಜಾಧವರಾವ್ ಮಹಾರಾಜ್ ಛತ್ರಿ ಎಂಬ ಸಭಾಮಂಟಪವನ್ನು ಅನ್ವೇಷಿಸುವಾಗ ಶಿಲ್ಪ ಪತ್ತೆಯಾಗಿದೆ ಎಂದು ನಾಗ್ಪುರದ ಪುರಾತತ್ವಶಾಸ್ತ್ರಜ್ಞರು ತಿಳಿಸಿದ್ದಾರೆ. ಸಭಾಮಂಟಪದ ಪತ್ತೆಗೆ ಉತ್ಖನನದ ವೇಳೆ ಆಳವಾಗಿ ಪರಿಶೀಲನೆ ನಡೆಸಿದಾಗ ಮೊದಲಿಗೆ ಲಕ್ಷ್ಮಿ ದೇವಿಯ ವಿಗ್ರಹ ಪತ್ತೆಯಾಗಿದೆ, ನಂತರ ಶೇಷಶಾಯಿ ವಿಷ್ಣುವಿನ (ಮಲಗಿದ ರೂಪದಲ್ಲಿರುವ) ಬೃಹತ್ ವಿಗ್ರಹ ಪತ್ತೆಯಾಗಿದೆ.
ಈ ಶಿಲ್ಪವು ಕ್ಲೋರೈಟ್ ಶಿಸ್ಟ್ ಶಿಲೆಯಿಂದ ಮಾಡಲ್ಪಟ್ಟಿದೆ. ಈ ರೀತಿಯ ಶಿಲ್ಪಗಳನ್ನು ಹೆಚ್ಚಾಗಿ ದಕ್ಷಿಣ ಭಾರತದಲ್ಲಿ ಹೊಯ್ಸಳು ತಯಾರಿಸುತ್ತಿದ್ದರು. ಇದರಲ್ಲಿ ವಿಷ್ಣು, ಶೇಷ ನಾಗನ ಮೇಲೆ ಮಲಗಿರುವ ಮತ್ತು ಲಕ್ಷ್ಮಿ ದೇವಿಯು ಕುಳಿತುಕೊಂಡು ವಿಷ್ಣುವಿನ ಪಾದಗಳನ್ನು ಒತ್ತುತ್ತಿರುವ ದೃಶ್ಯವಿದೆ. ವಿಗ್ರಹದ ಸುತ್ತಲೂ ವಿಷ್ಣು ದಶಾವತಾರ, ಸಮುದ್ರಮಂಥನವನ್ನು ಚಿತ್ರಿಸಲಾಗಿದೆ. ಸಮುದ್ರಮಂಥನದ ಅಶ್ವ, ಐರಾವತ ಮುಂತಾದವುಗಳೂ ವಿಗ್ರಹದ ಮೇಲೆ ಕಾಣಸಿಗುತ್ತವೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA