ರಾಯ್ಪರ: ಭದ್ರತಾ ಪಡೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ನಕ್ಸಲರು ಅಡಗಿಸಿಟ್ಟಿದ್ದ ಐಇಡಿ ಸುಧಾರಿತ ಸ್ಫೋಟಕ ಸಾಧನ ಸ್ಫೋಟಗೊಂಡು ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ.
ನಕ್ಸಲ್ ಕೇಂದ್ರಿತ ಪ್ರದೇಶವಾದ ನಾರಾಯಣಪುರ ಜಿಲ್ಲೆಯ ಅಬುಜ್ ಮಾರ್ ನಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡಿರುವ ಯೋಧರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭದ್ರತಾ ಪಡೆ ಸಿಬ್ಬಂದಿ ಗಾರ್ಪಾ ಗ್ರಾಮದ ಬಳಿ ಗಸ್ತು ತಿರುಗುತ್ತಿದ್ದ ವೇಳೆ ನಕ್ಸಲರು ಅಡಗಿಸಿಟ್ಟಿದ್ದ ಐಇಡಿ ಸ್ಫೋಟಗೊಂಡಿದೆ. ಈ ಪ್ರದೇಶ ನಕ್ಸಲ್ ಕೇಂದ್ರಿತ ಪ್ರದೇಶವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx