ಬೆಂಗಳೂರು: ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಬಿಜೆಪಿಯವರಿಗೆ ನೈತಿಕತೆ ಇದ್ದರೆ ಮೊದಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ತಮ್ಮ ಪಕ್ಷದಿಂದ ಮೊದಲು ಹೊರಹಾಕಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯವರು ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಹಾಗೂ ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ನಾವು ಇದಕ್ಕೆ ಹೆದರುವುದಿಲ್ಲ ಎಂದರು.
ಕರಡಿಗೆ ಎಷ್ಟು ಕೂದಲುಗಳಿವೆಯೋ ಅಷ್ಟು ಆರೋಪಗಳು ಬಿಜೆಪಿಯವರ ಮೇಲಿದೆ. ಬಿ.ವೈ.ವಿಜಯೇಂದ್ರ ಸೆಲ್ ಕಂಪನಿಗಳ ಮೂಲಕ ಮನಿಲ್ಯಾಂಡ್ರಿಂಗ್ ಮಾಡುತ್ತಿದ್ದಾರೆ. ಹಲವು ಬಾರಿ ಮಲೇಷಿಯಾ ಸೇರಿದಂತೆ ವಿದೇಶಗಳಿಗೆ ಭೇಟಿ ನೀಡಿದ್ದಾರೆ. ಅವರು ಎಷ್ಟು ಬಾರಿ ವಿದೇಶಕ್ಕೆ ಭೇಟಿ ನೀಡಿದ್ದಾರೆ ಎಂಬ ಬಗ್ಗೆ ಪಾಸ್ಪೋರ್ಟ್ ತೋರಿಸಲಿ. ನಾವು ನಮ ಪಾಸ್ಪೋರ್ಟ್ ತೋರಿಸುತ್ತೇವೆ ಎಂದು ಸೆಡ್ಡು ಹೊಡೆದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296