nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವರಾತ್ರಿ

    October 16, 2026

    ಸ್ಟ್ಯಾನ್‌ ಫೋರ್ಡ್– ಎಲ್ಸೆವಿಯರ್ ವಿಶ್ವದ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ಸರ್ಕಾರಿ ಕಾಲೇಜಿನ ಪ್ರೊ. ಡಾ. ಯೋಗೀಶ್ ಎನ್. ಸೇರ್ಪಡೆ

    October 16, 2026

    ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ

    October 16, 2026
    Facebook Twitter Instagram
    ಟ್ರೆಂಡಿಂಗ್
    • ನವರಾತ್ರಿ
    • ಸ್ಟ್ಯಾನ್‌ ಫೋರ್ಡ್– ಎಲ್ಸೆವಿಯರ್ ವಿಶ್ವದ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ಸರ್ಕಾರಿ ಕಾಲೇಜಿನ ಪ್ರೊ. ಡಾ. ಯೋಗೀಶ್ ಎನ್. ಸೇರ್ಪಡೆ
    • ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ
    • ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?
    • ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ
    • ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್
    • ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ
    • ಕೇದಿಗೇಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ: ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾನೂನು ಸುವ್ಯವಸ್ಥೆ  ಉತ್ತಮವಾಗಿದ್ದರೆ ಹೆಚ್ಚು ಬಂಡವಾಳ ಹೂಡಿಕೆಯಾಗುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
    ರಾಜ್ಯ ಸುದ್ದಿ July 7, 2024

    ಕಾನೂನು ಸುವ್ಯವಸ್ಥೆ  ಉತ್ತಮವಾಗಿದ್ದರೆ ಹೆಚ್ಚು ಬಂಡವಾಳ ಹೂಡಿಕೆಯಾಗುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    By adminJuly 7, 2024No Comments3 Mins Read
    siddaramaiah

    ಬೆಂಗಳೂರು: ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಅಭಿವೃದ್ಧಿಗೆ ನೇರ ಸಂಬಂಧವಿದೆ. ಆದ್ದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲೇಬೇಕು. ಕರ್ನಾಟಕ ಪೋಲೀಸರ ಬಗ್ಗೆ ದೇಶದಲ್ಲಿ ಒಳ್ಳೆ ಹೆಸರಿದೆ. ಈ ಹೆಸರಿಗೆ ಕಳಂಕ ತರುವ ಕೆಲಸ ಯಾರೂ ಮಾಡಬಾರದು. ಹೆಸರನ್ನು ಎತ್ತರಕ್ಕೇರಿಸುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮೇಳನ ಹಾಗೂ ಇಲಾಖೆ ಪರಿಶೀಲನಾ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಕಾನೂನು ಸುವ್ಯವಸ್ಥೆ  ಉತ್ತಮವಾಗಿದ್ದರೆ ಹೆಚ್ಚು ಬಂಡವಾಳ ಹೂಡಿಕೆಯಾಗುತ್ತದೆ. ಬಂಡವಾಳ ಹೂಡಿಕೆಯಾದರೆ ಉದ್ಯೋಗ ಸೃಜನೆಯಾಗಿ ತಲಾ ಆದಾಯ ಹೆಚ್ಚಾಗುತ್ತದೆ ಎಂದರು.

    ಕರ್ತವ್ಯ ಲೋಪವಾದರೆ ಸಹಿಸುವುದಿಲ್ಲ:

    ಸಾರ್ವಜನಿಕರ ಅಭಿಪ್ರಾಯ ರೂಪಿತವಾಗುವ ಬಗ್ಗೆ ಪೋಲೀಸರು ಗಮನ ಹರಿಸಬೇಕು. ಪೊಲೀಸ್ ವ್ಯವಸ್ಥೆಯಲ್ಲಿ ಜನರ ಆಸ್ತಿಪಾಸ್ತಿ ಪ್ರಾಣ, ಮಾನ ರಕ್ಷಣೆ, ಸುರಕ್ಷಿತ ವ್ಯವಸ್ಥೆ, ನಿರ್ಭಯವಾಗಿ ಬದುಕುವ ವ್ಯವಸ್ಥೆ ನಿರ್ಮಾಣ ಮಾಡುವುದು ನಮ್ಮ ಕರ್ತವ್ಯ. ಒಳ್ಳೆ ಕೆಲಸ  ಮಾಡಿದರೆ ಸರ್ಕಾರ ಶ್ಲಾಘನೆ, ಕರ್ತವ್ಯ ಲೋಪವಾದರೆ  ಸಹಿಸುವುದಿಲ್ಲ ಎಂದು ಸ್ಪಷ್ಟವಾಗಿ ಸೂಚಿಸಲಾಗಿದೆ  ಎಂದರು.

    ರಿಯಲ್ ಎಸ್ಟೇಟ್ ಮಾಡುವವರೊಂದಿಗೆ ಯಾವ ಕಾರಣಕ್ಕೂ ಶಾಮೀಲಾಗಬಾರದು. ಇವರೇ ಸ್ವತ:  ರಿಯಲ್ ಎಸ್ಟೇಟ್ ಮಾಡುವುದು ತಿಳಿದರೆ ಕಠಿಣ ಕ್ರಮ ಜರುಗಿಸಲಾಗುವುದು. ಎಸ್. ಪಿ, ಡಿಸಿಪಿ, ಐಜಿ, ಪೊಲೀಸ್ ಆಯುಕ್ತರು ಪ್ರತಿ ದಿನ ಒಂದು ಪೊಲೀಸ್ ಠಾಣೆಗೆ ಭೇಟಿ ನೀಡಲೇ ಬೇಕು. ಸ್ಥಳೀಯ ಜನರನ್ನು ಭೇಟಿ ಮಾಡಿ ಇಲ್ಲಿನ ಸಮಸ್ಯೆಗಳೇನು ಎಂದು ಅರಿಯಬೇಕು. ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಯದೆ ಯಾವ ಅಪರಾಧಗಳು ನಡೆಯಲು ಸಾಧ್ಯವಿಲ್ಲ. ಮಾದಕ ವಸ್ತು, ಕಳ್ಳತನ, ದರೋಡೆ, ಜೂಜು, ಮಟ್ಕಾ ಮುಂತಾದವು ಗೊತ್ತಿಲ್ಲದೆ ನಡೆಯಲು ಸಾಧ್ಯವಿಲ್ಲ. ಕೆಲವೆಡೆ ಪೋಲಿಸಿನವರು ಇಂಥವರ ಜೊತೆ ಶಾಮೀಲಾಗುತ್ತಾರೆ. ಅವರು ಮನಸ್ಸು ಮಾಡಿದರೆ ಬಹುತೇಕ ಅಪರಾಧಗಳನ್ನು ತಡೆಯಲು ಸಾಧ್ಯ. ಇವರೆಲ್ಲರೂ ಜಾಗೃತರಾಗಲು ಪೊಲೀಸ್ ಅಧಿಕಾರಿಗಳು ಮೇಲಿಂದ ಮೇಲೆ ಭೇಟಿ ನೀಡಬೇಕು. ಕನಿಷ್ಠ ಒಂದು ತಿಂಗಳಲ್ಲಿ ಮೂರು ಠಾಣೆಗಳಿಗೆ ಭೇಟಿ ನೀಡಿ ಜನಸಂಪರ್ಕ ಮಾಡಿದರೆ ವಿಷಯ ತಿಳಿಯುತ್ತದೆ ಇದನ್ನು ಕಟ್ಟುನಿಟ್ಟಾಗಿ ಮಾಡಲು ಸೂಚಿಸಲಾಗಿದೆ ಎಂದರು.

    ಪೊಲೀಸರ ಮಧ್ಯೆ ಸಮನ್ವಯದ ಕೊರತೆಯಿದೆ. ಪೊಲೀಸರಿಗೆ ದೂರದೃಷ್ಟಿ ಇರಬೇಕು. ಒಂದು ಮಾಹಿತಿ ಬಂದರೆ ಅದರ ಬಗ್ಗೆ ಫಾಲೋ ಆಫ್ ಕ್ರಮ ವಹಿಸಬೇಕು. ಹುಬ್ಬಳ್ಳಿಯಲ್ಲಿ ನೇಹಾ ಕೊಲೆಯ ನಂತರ ಆದ ಮತ್ತೊಂದು ಕೊಲೆ ಪ್ರಕರಣದಲ್ಲಿ ಆರೋಪಿ ಬೆದರಿಕೆ ಹಾಕಿರುವ ಬಗ್ಗೆ ಪೊಲೀಸ್  ಠಾಣೆಯಲ್ಲಿ ದೂರು ನೀಡಿದಾಗಲೇ ಕ್ರಮಕೈಗೊಂಡಿದ್ದರೆ ಕೊಲೆ ತಡೆಯಲು ಸಾಧ್ಯವಾಗುತ್ತಿತ್ತು ಎಂದು  ಉದಾಹರಣೆಗಳನ್ನು ನೀಡಿ ಸೂಚನೆ ನೀಡಲಾಗಿದೆ ಎಂದರು.

    ಪೊಲೀಸರಲ್ಲಿ ಶಿಸ್ತು ಇರಲೇಬೇಕು. ಎಲ್ಲಾ ಪೋಲೀಸರು ಶಿಸ್ತು ಕಾಪಾಡಿಕೊಂಡು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಸೂಚನೆ ನೀಡಿರುವುದಾಗಿ ತಿಳಿಸಿದರು.

    ಹೊಸರೂಪ ಅಪರಾಧ ತಡೆಗೆ ಹೆಚ್ಚಿನ ತರಬೇತಿ:

    ಸಮಾಜದಲ್ಲಿ ಬೆಳವಣಿಗೆಯಾದಂತೆ ಹೊಸ ರೂಪದ ಅಪರಾಧಗಳು ಸೃಷ್ಟಿಯಾಗುತ್ತವೆ. ಅವುಗಳನ್ನು ತಡೆಯಲು ತಂತ್ರಜ್ಞಾನ ಸೇರಿದಂತೆ ಹೆಚ್ಚಿನ ತರಬೇತಿ ನೀಡಲು ಸೂಚಿಸಲಾಗಿದೆ.

    ಮಾದಕವಸ್ತುಗಳ ದಂಧೆ ಮೈಸೂರು, ಬೆಂಗಳೂರು, ಮಂಗಳೂರು, ಹುಬ್ಬಳ್ಳಿ ಧಾರವಾಡ ಬೆಳಗಾವಿ ಮುಂತಾದೆಡೆ ಹೆಚ್ಚಾ ಗುತ್ತಿದೆ. ಮಕ್ಕಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು. ಈ ವ್ಯವಹಾರದಲ್ಲಿ ಭಾಗಿಯಾಗಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

    ಜನಸಂದಣಿ / ನಿರ್ಜನ ಪ್ರದೇಶದಲ್ಲಿ ಪೋಲೀಸರು ಸಮವಸ್ತ್ರದಲ್ಲಿರಬೇಕು:

    ಇ — ಬೀಟ್ ಎಂದರೇನು ಎಂದು ಬಹಳ ಪೊಲೀಸರಿಗೆ ತಿಳಿದಿಲ್ಲ. ಜನಸಂದಣಿ ಇರುವಲ್ಲಿ ಹಾಗೂ ನಿರ್ಜನ ಪ್ರದೇಶದಲ್ಲಿ ಇ — ಬೀಟ್ ಹೆಚ್ಚು ಮಾಡಲಾಗುವುದು. ಪೊಲೀಸರ ಹಾಜರಿ ಸಮವಸ್ತ್ರದಲ್ಲಿರಬೇಕು. ಆಗ ಜನರಲ್ಲಿ ಭಯ ಮೂಡುತ್ತದೆ.  ಇದರಿಂದ ಅಪರಾಧಗಳನ್ನು ನಿಲ್ಲಿಸಲು ಸಾಧ್ಯವಾಗುತ್ತದೆ ಎಂದರು.

    ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಜೀರೋ ಟ್ರಾಫಿಲ್ ವ್ಯವಸ್ಥೆ ಮಾಡಬಾರದು ಎಂದು ಸೂಚಿಸಲಾಗಿದೆ. ಕಾನ್ಸ್ ಟೇಬಲ್ ಗಳ ಜೊತೆಗೆ ಉನ್ನತ ಅಧಿಕಾರಿಗಳು ಕೂಡ ಸಂಚಾರ ನಿಯಂತ್ರಣ ಮಾಡಲು ಸೂಚಿಸಲಾಗಿದೆ. ಪೊಲೀಸರು ಕಾನೂನು ವ್ಯವಸ್ಥೆಯನ್ನು ಸುಧಾರಿಸಬೇಕು ಎಂಬುದು ನಮ್ಮ ಉದ್ದೇಶ , ಇದಕ್ಕೆ ಪೋಲಿಸರು ಸಹಕರಿಸುತ್ತಾರೆ ಎಂಬ ನಂಬಿಕೆ, ವಿಶ್ವಾಸ ಇದೆ. ಪೋಲೀಸರು ಮನಸ್ಸು ಮಾಡಿದರೆ ಅಪರಾಧಗಳನ್ನು ತಡೆಗಟ್ಟುವುದು ಅಸಾಧ್ಯವೇನಲ್ಲ. ಇಂಟೆಲಿಜೆನ್ಸ್ ಬಲಬಡಿಸಲೂ ಕೂಡ ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದರು.

    ಕರ್ತವ್ಯ ಲೋಪವಾದರೆ ಮುಲಾಜಿಲ್ಲದೆ ಕ್ರಮ:

    ನಮ್ಮ ಎಲ್ಲಾ ಕಾರ್ಯಗಳೂ ಕೂಡ ಪಾರದರ್ಶಕವಾಗಿರಬೇಕು ಎಂದು ಸೂಚಿಸಲಾಗಿದೆ. ಉದ್ದೇಶಪೂರ್ವಕವಾಗಿ ಕರ್ತವ್ಯಲೋಪ ಮಾಡಿದರೆ ಮುಲಾಜಿಲ್ಲದೆ ಕ್ರಮ ವಹಿಸಲಾಗುವುದು ಎಂದರು.

    ವಿರೋಧಪಕ್ಷದವರು ಪ್ರಕರಣಗಳನ್ನು ಸಿಬಿಐಗೆ ವಹಿಸಲು ಒತ್ತಾಯಿಸುತ್ತಾರೆ.  ಆದರೆ ಅಲ್ಲಿರುವವರೂ ನಮ್ಮ ಪೊಲೀಸರೇ. ಸಿಬಿಐ, ಸಿಐಡಿ ಕೂಡ ತನಿಖಾ ಸಂಸ್ಥೆಗಳೇ ಎಂದರು. ಅವರು ಅಧಿಕಾರದಲ್ಲಿದ್ದಾಗ ಚೋರ್ ಬಚಾವೋ ಸಂಸ್ಥೆ ಎನ್ನುತ್ತಿದ್ದರು. ಕೇಂದ್ರ ಸರ್ಕಾರ ಬೇರೆ ಬೇರೆ ರಾಜ್ಯಗಳಲ್ಲಿನ ಅಪರಾಧಗಳನ್ನು ತನಿಖೆ ಮಾಡಲು ಸ್ಥಾಪಿಸಿರುವ ಸಂಸ್ಥೆ ಸಿಬಿಐ. ರಾಜ್ಯ ಪೋಲೀಸರು ಕೂಡ ತನಿಖೆ ಮಾಡಲು ಸಮರ್ಥರಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?

    October 16, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ನವರಾತ್ರಿ

    October 16, 2026

    ವಿ.ಎಂ.ಎಸ್.ಗೋಪಿ ಮೈಸೂರು ದಸರಾ ಎಷ್ಟೊಂದು ಸುಂದರ ನವರಾತ್ರಿ ಉತ್ಸವ ಹಬ್ಬದ ಸಡಗರ ಎಲ್ಲೆಲ್ಲೂ ಸಂಭ್ರಮ ನವ ಅವತಾರಗಳು ಶೈಲಪುತ್ರಿ ದುರ್ಗೆ…

    ಸ್ಟ್ಯಾನ್‌ ಫೋರ್ಡ್– ಎಲ್ಸೆವಿಯರ್ ವಿಶ್ವದ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ಸರ್ಕಾರಿ ಕಾಲೇಜಿನ ಪ್ರೊ. ಡಾ. ಯೋಗೀಶ್ ಎನ್. ಸೇರ್ಪಡೆ

    October 16, 2026

    ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ

    October 16, 2026

    ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?

    October 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.